ಪ್ರಧಾನಿ ಮೋದಿ ಕಾರ್ಯಕ್ರಮ; ರೈಲುಗಳ ಸಂಚಾರದಲ್ಲಿ ವ್ಯತ್ಯಯ, ಈ ಎರಡೂ ಕಡೆಗೆ ತಡವಾಗಿ ತಲುಪಲಿರುವ ರೈಲು..

train
Published on

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೆಂಗಳೂರಿನಲ್ಲಿನ ಕಾರ್ಯಕ್ರಮಗಳನ್ನು ಮುಗಿಸಿ ಮೈಸೂರಿಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಈ ಭಾಗದ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಇಂದು ಸಂಜೆ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಕೇಂದ್ರ ಸರ್ಕಾರದ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ಅಲ್ಲದೆ ಈ ವೇಳೆ ನಡೆಯಲಿರುವ ಸಮಾರಂಭದಲ್ಲಿ ಸಾವಿರಾರು ಮಂದಿ ಹಾಜರಿರುವ ಹಿನ್ನೆಲೆಯಲ್ಲಿ ರೈಲುಗಳು ವಿಳಂಬವಾಗಿ ಹೊರಡಲಿವೆ.

ಮಹಾರಾಜ ಕಾಲೇಜು ಮೈದಾನದ ಹಿಂಭಾಗವೇ ಮೈಸೂರು-ಚಾಮರಾಜನಗರ ಸಂಪರ್ಕ ಕಲ್ಪಿಸುವ ರೈಲು ಹಳಿ ಇರುವುದರಿಂದ ಈ ಭಾಗದ ರೈಲುಗಳು ತಡವಾಗಿ ಹೊರಡಲಿವೆ. ಮೈಸೂರಿನಿಂದ 6.40ಕ್ಕೆ ಚಾಮರಾಜನಗರಕ್ಕೆ ಹೊರಡುವ ರೈಲು ತಡವಾಗಿ ಹೊರಡಲಿದೆ. ಹಾಗೇ ಚಾಮರಾಜನಗರದಿಂದ ಮೈಸೂರಿಗೆ ಬರುವ ರೈಲು ಕೂಡ ತಡವಾಗಿ ತಲುಪಲಿದೆ. ಮೋದಿ ಕಾರ್ಯಕ್ರಮ ಮುಗಿದ ಬಳಿಕ ರೈಲುಗಳ ಸಂಚಾರ ಆರಂಭವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ರೈಲ್ವೆ ಅಧಿಕಾರಿಗಳು ಕೋರಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net