ಆಂಬುಲೆನ್ಸ್​ನಲ್ಲೇ ಹೆರಿಗೆ

23 YLP 02
Published on

ಯಲ್ಲಾಪುರ: ತಾಲೂಕಿನ ನಂದೊಳ್ಳಿಯಿಂದ ಯಲ್ಲಾಪುರದ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ 108 ಆಂಬುಲೆನ್ಸ್ ವಾಹನದಲ್ಲಿ ಗರ್ಭಿಣಿಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ನಂದೊಳ್ಳಿ ಗ್ರಾಮದ ವಿದ್ಯಾ ರವಿ ಸಿದ್ದಿ ಮಗುವಿಗೆ ಜನ್ಮ ನೀಡಿದ ಮಹಿಳೆ. ಮಂಗಳವಾರ ರಾತ್ರಿ ನಂದೊಳ್ಳಿಯಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಹೆರಿಗೆಗೆಂದು ಅವರನ್ನು ಕರೆದುಕೊಂಡು ಹೋಗುತ್ತಿರುವಾಗ ಮಾರ್ಗಮಧ್ಯೆ ಹೆರಿಗೆ ನೋವು ಕಾಣಿಸಿಕೊಂಡಿದೆ.

ಆ ವೇಳೆ ತುರ್ತು ವೈದ್ಯಕೀಯ ಸಿಬ್ಬಂದಿ ತಂತ್ರಜ್ಞ ಶಿವಕುಮಾರ ಇಟಗಿ ಹಾಗೂ ಚಾಲಕ ಶ್ರೀಶೈಲ ಮಾದರ ಸುಸೂತ್ರವಾಗಿ ಹೆರಿಗೆ ಮಾಡಿಸಿದ್ದಾರೆ. ತಾಯಿ, ಮಗು ಆರೋಗ್ಯವಾಗಿದ್ದು, ಅವರನ್ನು ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net