ಸರ್ಕಾರಿ ಸವಲತ್ತುಗಳನ್ನು ಅರ್ಹರಿಗೆ ತಲುಪಿಸಿ

5 vikram 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಸರ್ಕಾರ ಜನರಿಗೆ ಕೊಟ್ಟ ಸವಲತ್ತುಗಳನ್ನು ನಾವು ನೀವು ಸೇರಿ ನಿಷ್ಠೆಯಿಂದ, ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ. ಎಚ್​. ಕೃಷ್ಣ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಹಾಗೂ ಸದಸ್ಯರ ಸಹಯೋಗದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಎಲ್ಲ ಅಧಿಕಾರಿಗಳು ಉತ್ತಮ ರೀತಿ ಕೆಲಸ ಮಾಡಿದರೆ ಜಿಲ್ಲೆಗೆ ಮತ್ತು ರಾಜ್ಯಕ್ಕೆ ಒಳ್ಳೆ ಹೆಸರು ತಂದಂತೆ ಆಗುತ್ತದೆ. ಎಲ್ಲ ಇಲಾಖೆ ಅಧಿಕಾರಿಗಳು ಸಮಯವನ್ನು ಸರಿಯಾಗಿ ಉಪಯೋಗಿಸಿಕೊಂಡು ಜಿಲ್ಲೆಯಲ್ಲಿ ಒಳ್ಳೆ ಕೆಲಸ ಮಾಡಿ. ನಮ್ಮ ಜೊತೆ ಕೈಜೋಡಿಸಿದರೆ ನ್ಯೂನತೆಗಳು ಆಗದಂತೆ ನೋಡಿಕೊಂಡು ಹೋಗಬಹುದು ಎಂದರು.

ಸಿಇಒ ಭುವನೇಶ ಪಾಟೀಲ ಮಾತನಾಡಿ, ಜಿಲ್ಲೆಯ ಇಲಾಖೆ ಅಧಿಕಾರಿಗಳು ಸರ್ಕಾರದ ನಿಯಮಾನುಸಾರ ಪಾಲನೆ ಮಾಡಿ. ಆಹಾರ ಕೊಡುವುದು ಅಷ್ಟೇ ಅಲ್ಲ. ಸರಿಯಾಗಿ ಇದೆಯೋ? ಇಲ್ಲವೇ ಎಂಬುದನ್ನು ಗಮನಿಸುವುದೂ ಅಧಿಕಾರಿಗಳ ಜವಾಬ್ದಾರಿ ಎಂದರು.

ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯರಾದ ಲಿಂಗರಾಜ ಕೋಟೆ, ಸುಮಂತ ರಾವ್​, ಮಾರುತಿ ದೊಡ್ಡಲಿಂಗಣ್ಣವರ, ರೋಹಿಣಿ ಪ್ರಿಯ, ಕೆ.ಎಸ್​.ವಿಜಯಲಕ್ಷ್ಮೀ, ಅಧಿಕಾರಿಗಳು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net