ಸರ್ಕಾರದ ಕಾರ್ಯಕ್ರಮ ಮನೆಮನೆಗೆ ತಲುಪಿಸಿ

ಸರ್ಕಾರದ ಕಾರ್ಯಕ್ರಮ ಮನೆಮನೆಗೆ ತಲುಪಿಸಿ
Published on

ಗುಂಡ್ಲುಪೇಟೆ: ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಜನಾಭಿಪ್ರಾಯವಿದ್ದು, ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮನೆ ಮನೆಗಳಿಗೆ ತಲುಪಿಸುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಬೇಕು ಎಂದು ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಕರೆ ನೀಡಿದರು.

ಶನಿವಾರ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಜನಪರ ಕಾರ್ಯಕ್ರಮಗಳು ಇಲ್ಲದ ಕಾರಣ ರಾಮಮಂದಿರ ಮುಂತಾದ ಜನರ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತಿದೆ. ಆದರೆ, ಕಾಂಗ್ರೆಸ್ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಿ ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಜನಾಭಿಪ್ರಾಯವಿದೆ. ಕಾರ್ಯಕರ್ತರು ಸರ್ಕಾರದ ಯೋಜನೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಮೂಲಕ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಬೇಕು ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಖರ್, ಮುನಿರಾಜು, ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡಪ್ರಸಾದ್, ಕಾಡಾ ಮಾಜಿ ಅಧ್ಯಕ್ಷ ಎಚ್.ಎಸ್.ನಂಜಪ್ಪ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net