ಫಲಾನುಭವಿಗೆ ಮನೆ ವಿತರಣೆ

ಫಲಾನುಭವಿಗೆ ಮನೆ ವಿತರಣೆ
Published on

ಮದ್ದೂರು: ತಾಲೂಕಿನ ಕದಲೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ವಾತ್ಸಲ್ಯ ಮನೆಯನ್ನು ಫಲಾನುಭವಿ ಸಣ್ಣಮ್ಮ ಅವರಿಗೆ ಜಿಲ್ಲಾ ನಿರ್ದೇಶಕಿ ಚೇತನಾ ಇತ್ತೀಚೆಗೆ ಹಸ್ತಾಂತರಿಸಿದರು.

ಜಿಲ್ಲಾ ನಿರ್ದೇಶಕಿ ಚೇತನಾ ಮಾತನಾಡಿ, ವಾತ್ಸಲ್ಯ ಯೋಜನೆ ಡಾ.ವೀರೇಂದ್ರ ಹೆಗ್ಗಡೆಯವರ ಪತ್ನಿ ಹೇಮಾವತಿ ಅವರ ನೆಚ್ಚಿನ ಕಾರ್ಯಕ್ರಮವಾಗಿದ್ದು, ಅಶಕ್ತರಿಗೆ ವೃದ್ಧಾಪ್ಯ ಕಾಲದಲ್ಲಿ ನೆಮ್ಮದಿಯಿಂದ ಬದುಕಲು ಸಹಕರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ.

ಪ್ರತಿ ತಿಂಗಳು ಮಾಶಾಸನ ವಿತರಣೆ ಹಾಗೂ ಸಮಾಜದಲ್ಲಿ ಹಿಂದುಳಿದವರನ್ನು ಮುನ್ನೆಲೆಗೆ ತರುವ ನಿಟ್ಟಿನಲ್ಲಿ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಬಿ.ಆರ್. ಯೋಗೀಶ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ತೇಜಾವತಿ, ಮೇಲ್ವಿಚಾರಕಿ ಲತಾ, ಸೇವಾ ಪ್ರತಿನಿಧಿ ಪವಿತ್ರಾ, ಮುಖಂಡ ಅನಂತಮೂರ್ತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net