ವಿಕಲಚೇತನರಿಗೆ ವಾಹನ ವಿತರಣೆ

Delivery of vehicles to the disabled
Published on

ಮಡಿಕೇರಿ:

ಸರ್ಕಾರದ ಸವಲತ್ತುಗಳನ್ನು ಫಲಾನುಭವಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು. ಇಲ್ಲಿನ ಗಾಂಧಿ ಮೈದಾನದಲ್ಲಿ ಕೊಡಗು ಜಿಲ್ಲಾಡಳಿತ ಶನಿವಾರ ಏರ್ಪಡಿಸಿದ ಅಂಗನವಾಡಿ ಕಾರ್ಯಕರ್ತರಿಗೆ ಮೊಬೈಲ್ ವಿತರಣೆ ಮತ್ತು ವಿಕಲಚೇತನರಿಗೆ ಸ್ಕೂಟರ್ ಹಾಗೂ ಇನ್ನಿತರ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.

ವಿಕಲಚೇತನರು ಸೇರಿದಂತೆ ಸಮಾಜದ ದುರ್ಬಲರಿಗಾಗಿ ಸರ್ಕಾರ ಸಾಕಷ್ಡು ಯೋಜನೆಗಳನ್ನು ರೂಪಿಸಿದೆ. ಇಂಥ ಯೋಜನೆಗಳ ಸಂಖ್ಯೆಗಿAತ ಅದರ ಸದ್ವಿನಿಯೋಗ ಎಷ್ಟರ ಮಟ್ಟಿಗೆ ಆಗಿದೆ ಎನ್ನುವುದು ಮುಖ್ಯ ಎಂದರು.
ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪಂಚಾಯತ್ ಸಿ.ಇ.ಒ. ವರ್ಣಿತ್ ನೇಗಿ, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಾಡೆ, ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net