ರಾಜ್ಯದಲ್ಲಿ ಆತಂಕ ಸೃಷ್ಟಿಸಿದ ಕರೊನಾ ಡೆಲ್ಟಾ ರೂಪಾಂತರ ಪ್ರಭೇದ: ಬೆಂಗಳೂರಿನಲ್ಲೇ 2 ಪ್ರಕರಣ ಪತ್ತೆ!

coronavirus
Published on

ಬೆಂಗಳೂರು: ಕೋವಿಡ್ ಎರಡನೇ ಅಲೆ ತಗ್ಗುತ್ತಿರುವ ಬೆನ್ನಲ್ಲೇ ಆತಂಕ ಸೃಷ್ಟಿಸಿರುವ ಡೆಲ್ಟಾದ ರೂಪಾಂತರಿ ಪ್ರಭೇದ ಎವೈ.4.2 ಎರಡು ಪ್ರಕರಣಗಳು ಇದೀಗ ಬೆಂಗಳೂರಿನಲ್ಲಿ ಪತ್ತೆಯಾಗಿವೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ ಜುಲೈನಲ್ಲಿ ಕೋವಿಡ್ ಸೋಂಕಿತರ ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸಿಸ್ ಪರೀಕ್ಷೆಗೆ ಕಳುಹಿಸಲಾಗಿತ್ತು. ಅವುಗಳಲ್ಲಿ ಎರಡು ಮಾದರಿಗಳಲ್ಲಿ ಎವೈ.4.2 ರೂಪಾಂತರಿ ಪ್ರಭೇದ ಪತ್ತೆಯಾಗಿರುವುದು ಸೋಮವಾರ ವರದಿಯಲ್ಲಿ ದೃಢಪಟ್ಟಿದ್ದು, ಆತಂಕಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಆರೋಗ್ಯ ವಿಭಾಗವು ಸೋಂಕಿತರ ಮಾಹಿತಿ ಪತ್ತೆಗೆ ಕಾರ್ಯಪ್ರವೃತ್ತವಾಗಿರುವುದಾಗಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಡಾ.ಕೆ.ವಿ. ತ್ರಿಲೋಕ್ ಚಂದ್ರ ತಿಳಿಸಿದ್ದಾರೆ.

ಈಗಾಗಲೇ ಮಧ್ಯಪ್ರದೇಶದ ಇಂದೋರ್​ನಲ್ಲಿ ಏಳು ಪ್ರಕರಣಗಳು ಪತ್ತೆಯಾಗಿದ್ದು, ಅದರ ಬೆನ್ನಲ್ಲೇ ಕೇರಳದಲ್ಲಿ ನಾಲ್ಕು, ಕರ್ನಾಟಕ ಮತ್ತು ತೆಲಂಗಾಣದಲ್ಲಿ ತಲಾ ಎರಡು ಹಾಗೂ ಜಮ್ಮು ಮತ್ತು ಕಾಶ್ಮೀರ ಹಾಗ ಮಹಾರಾಷ್ಟ್ರದಲ್ಲಿ ತಲಾ ಒಂದರಂತೆ ಭಾರತದಲ್ಲಿ ಇದೀಗ ಈ ಪ್ರಕರಣಗಳ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net