

ಬೆಳಗಾವಿ: ಮರಾಠಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನ ಮೇಲೆ ಹಲ್ಲೆ ಮಾಡಿ, ಪೋಕ್ಸೋ ಪ್ರಕರಣ ದಾಖಲಿಸಿರುವವರ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕೆಎಸ್ ಆರ್ ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ ಫೆಡರೇಶನ್ ಪಧಾದಿಕಾರಿಗಳು ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟಿಸಿದರು. ಬಳಿಕ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿದರು. ಆರ್.ಎಫ್.ಕವಳಿಕಾಯಿ ಇತರರಿದ್ದರು.