

ರಾಯಚೂರು ರಾಜ್ಯದ ರ‍್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟಾ ಆರಂಭ ಖಂಡಿಸಿ ಎಐಡಿಎಸ್‌ಓ ಸಂಘಟನೆ ವತಿಯಿಂದ ಮಂಗಳವಾರ ನಗರದ ಮಹಾನಗರ ಪಾಲಿಕೆ ಕಚೇರಿ ಮುಂದೆ ಪ್ರತಿಭಟನೆ ಮಾಡಿದರು.
ರಾಜ್ಯ ರ‍್ಕಾರವು ರ‍್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರತಿ ಸೀಟಿಗೆ ೨೫ ಲಕ್ಷ ರೂ.ಗಳ ದುಬಾರಿ ಶುಲ್ಕದೊಂದಿಗೆ ಶೇ.೧೫ ಎನ್‌ಆರ್‌ಐ ಕೋಟಾವನ್ನು ಆರಂಭಿಸಲು ನರ‍್ಧರಿಸಿದೆ. ರಾಜ್ಯ ರ‍್ಕಾರದ ಈ ನಡೆಯನ್ನು ಎಐಡಿಎಸ್ಓ ರ‍್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆಂದು ವಿದ್ಯರ‍್ಥಿಗಳು ಆಕ್ರೋಶ ವ್ಯಕ್ತ ಪಡಿಸಿದರು.
ಈ ಪ್ರತಿಭಟನೆಯಲ್ಲಿ ಎಐಡಿಎಸ್‌ಓ ರಾಜ್ಯ ಉಪಾಧ್ಯಕ್ಷ ಅಭಯ ದಿವಾಕರ್ ಮಾತನಾಡಿ, ಶೇ.೧೫ ಎನ್‌ಆರ್‌ಐ ಕೋಟಾವನ್ನು ಆರಂಭಿಸಲು ನರ‍್ಧರಿಸಿದ್ದರಿಂದ ವೈದ್ಯಕೀಯ ಕಾಲೇಜುಗಳಿಗೆ ಹಣ ಹರಿದುಬರಲಿದೆ ಎಂದು ರ‍್ಕಾರ ಹೇಳಿಕೊಂಡಿದ್ದರೂ, ವಾಸ್ತವದಲ್ಲಿ ಈ ವಿಧಾನವು ಬಡ- ಮಧ್ಯಮ ರ‍್ಗದ ವಿದ್ಯರ‍್ಥಿಗಳ ಪಾಲಿಗೆ ಅಮೂಲ್ಯವಾದ ರ‍್ಕಾರಿ ಸೀಟುಗಳನ್ನು ಶ್ರೀಮಂತರಿಗೆ ಹರಾಜು ಹಾಕುವ ಮತ್ತು ಸರ‍್ವಜನಿಕ ಸಂಸ್ಥೆಗಳನ್ನು ಖಾಸಗೀಕರಣದತ್ತ ತಳ್ಳುವ ಪ್ರಯತ್ನವಾಗಿದೆ.
ರ‍್ಕಾರಿ ವೈದ್ಯಕೀಯ ಕಾಲೇಜುಗಳನ್ನು ಯಾವುದೇ ರ‍್ಥಿಕ ಹಿನ್ನಲೆಯನ್ನು ಲೆಕ್ಕಿಸದೆ ರ‍್ಹ ಮತ್ತು ಪ್ರತಿಭಾವಂತ ವಿದ್ಯರ‍್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸುವ ಉದ್ದೇಶದೊಂದಿಗೆ ಸ್ಥಾಪಿಸಲಾಗಿದೆ.
ಬಡ ಮತ್ತು ಮಧ್ಯಮ ರ‍್ಗದ ಕುಟುಂಬಗಳ ಪ್ರತಿಭಾವಂತ ವಿದ್ಯರ‍್ಥಿಗಳಿಗೆ ಅವಕಾಶದ ಬಾಗಿಲು ಮುಚ್ಚುತ್ತಿದೆ. ಈಗಾಗಲೇ, ರ‍್ನಾಟಕದ ರ‍್ಕಾರಿ ವೈದ್ಯಕೀಯ ಕಾಲೇಜುಗಳ ಶುಲ್ಕವು ದೇಶದಲ್ಲಿಯೇ ಅತಿ ಹೆಚ್ಚಿದ್ದು, ಪಶ್ಚಿಮ ಬಂಗಾಳ ಮತ್ತು ಉತ್ತರ ಭಾರತದ ಹಲವು ರಾಜ್ಯಗಳ ಶುಲ್ಕಕ್ಕಿಂತ ಸುಮಾರು ಹತ್ತು ಪಟ್ಟು ಹೆಚ್ಚಾಗಿದೆ. ಈ ಅನ್ಯಾಯದ ಹೊರೆಯನ್ನು ಕಡಿಮೆ ಮಾಡುವ ಬದಲು, ರ‍್ಕಾರವು ವಿದ್ಯರ‍್ಥಿಗಳಿಂದ ಇನ್ನಷ್ಟು ಹಣವನ್ನು ವಸೂಲಿ ಮಾಡಲು ನರ‍್ಲಜ್ಜವಾಗಿ ಪ್ರಯತ್ನಿಸುತ್ತಿದೆ. ಈ ಕ್ರಮವು ರಾಜ್ಯ ರ‍್ಕಾರದ ವಿದ್ಯರ‍್ಥಿ ವಿರೋಧಿ ಮತ್ತು ಜನವಿರೋಧಿ ಮನೋಭಾವವನ್ನು ಬಟಾಬಯಲಾಗಿಸಿದೆಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂರ‍್ಭದಲ್ಲಿ ಜಿಲ್ಲಾ ಕರ‍್ಯರ‍್ಶಿ ಬಸವರಾಜ್, ನಂದಗೋಪಾಲ್,ಹೇಮಂತ್, ಶಿವಕುಮಾರ್ ಸೇರಿ ವಿವಿಧ ಕಾಲೇಜಿನ ವಿದ್ಯರ‍್ಥಿಗಳು ಇದ್ದರು.