

ರಾಯಚೂರು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹಾಗೂ ನಗರ ಶಾಸಕ ಡಾ.ಶಿವರಾಜ ಪಾಟೀಲ್ ಅವರಿಗೆ ಅಸಂವಿಧಾನಿಕ ಪದ ಬಳಕೆ ಮಾಡಿದ ಏಮ್ಸ್ ಹೋರಾಟ ಸಮಿತಿ ಪ್ರಧಾನ ಸಂಚಾಲಕ ಬಸವರಾಜ ಕಳಸ, ಅಶೋಕ ಕುಮಾರ ಜೈನ್ ವಿರುದ್ದ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಬಿಜೆಪಿ ಪಕ್ಷದ ನೇತೃತ್ವದಲ್ಲಿ ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು
ಜಿಲ್ಲಾ ಬಿಜೆಪಿ ಕಚೇರಿಯಿಂದ ಬೈಕ್ ರ‌್ಯಾಲಿ ಮೂಲಕ ಆರಂಭವಾದ ಮೆರವಣಿಗೆ ಜಿಲ್ಲಾಡಳಿತ ಭವನದವರೆಗೆ ನಡೆಸಿ ಜಿಲ್ಲಾಧಿಕಾರಿ ನಿತೀಶ್ ಕೆ. ಅವರಿಗೆ ಮನವಿ ಸಲ್ಲಿಸಿದ ಅವರು, ಅಸಂವಿಧಾನಿಕ ಪದ ಬಳಕೆ ಮಾಡಿದ ಏಮ್ಸ್ ಹೋರಾಟ ಸಮಿತಿ ಸಂಚಾಲಕ ಬಸವರಾಜ ಕಳಸ, ಅಶೋಕ ಕುಮಾರ ಸಿ.ಕೆ.ಜೈನ್ ಇವರನ್ನು ಬಂಧಿಸಿ ಕಾನೂನು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ ಮನವಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ನಗರ ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ಬಸವರಾಜ ಕಳಸ ಸೇರಿದಂತೆ ಅನೇಕರು ಏಮ್ಸ್‌ಗಾಗಿ ಹೋರಾಟ ಮಾಡುತ್ತಿಲ್ಲ. ಕೇವಲ ಕಾಂಗ್ರೆಸ್ ಏಜೆಂಟ್ ರೀತಿಯಲ್ಲಿ
ಈ ಸಂದರ್ಭದಲ್ಲಿಮಾಜಿ ಎಂಎಲ್ಸಿ ಎನ್.ಶಂಕ್ರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಮಾಜಿ ಶಾಸಕ ಎ.ಪಾಪಾರೆಡ್ಡಿ, ರವೀಂದ್ರ ಜಲ್ದಾರ್, ಆಂಜನೇಯ ಕಡಗೋಲ್, ಪಿ.ಯಲ್ಲಪ್ಪ, ಈ.ಶಶಿರಾಜ, ಎನ್.ಕೆ.ನಾಗರಾಜ, ರಾಘವೇಂದ್ರ ಊಟ್ಕೂರು, ಶಂಶಾಲಂ, ಸನ್ನಿ, ಸೈಯದ್ ಮುಕ್ತಿಯಾರ್, ತಿಮ್ಮಪ್ಪ ನಾಡಗೌಡ ಸೇರಿದಂತೆ ಅನೇಕರು ಇದ್ದರು.