ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹ

ಗುಂಡ್ಲುಪೇಟೆಯ ಬಸವೇಶ್ವರ ವೃತ್ತದಲ್ಲಿ ಕರ್ನಾಟಕ ಸೇನೆಯ ಪದಾದಿಕಾರಿಗಳು ಆನ್‌ಲೈನ್ ಬೆಟ್ಟಿಂಗ್ ನಿಷೇಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಸುರೇಶ್‌ನಾಯ್ಕ, ನಾಗರಾಜು, ಜಗದೀಶ್, ಸ್ವಾಮಿ, ಕೃಷ್ಣಮೂರ್ತಿ, ಸಿದ್ದರಾಜು, ನಟರಾಜಗೌಡ, ಕೃಷ್ಣ, ಮಹೇಶ್ ಇದ್ದರು.

Published on

ಗುಂಡ್ಲುಪೇಟೆ: ಕರ್ನಾಟಕ ಸೇನೆ ವತಿಯಿಂದ ಆನ್‌ಲೈನ್ ಬೆಟ್ಟಿಂಗ್ ಹಾಗೂ ಆನ್ ಲೈನ್ ಗೇಮಿಂಗ್ ವೆಬ್‌ಸೈಟ್‌ಗಳನ್ನು ಬಂದ್ ಮಾಡುವಂತೆ ಒತ್ತಾಯಿಸಿ ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪಟ್ಟಣದ ಪ್ರವಾಸಿಮಂದಿರದಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿದ ಕಾರ್ಯಕರ್ತರು ಬಸವೇಶ್ವರ ವೃತ್ತದಲ್ಲಿ ಮಾನವಸರಪಳಿ ರಚಿಸಿ ಆನ್‌ಲೈನ್ ದಂಧೆ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ತಾಲೂಕು ಅಧ್ಯಕ್ಷ ಸುರೇಶ್ ನಾಯ್ಕ ಮಾತನಾಡಿ, ಹಲವು ವಿದ್ಯಾರ್ಥಿಗಳು, ಯುವಕರು ಆನ್‌ಲೈನ್ ಬೆಟ್ಟಿಂಗ್ ಹಾಗೂ ಆನ್‌ಲೈನ್ ಗೇಮಿಂಗ್‌ಗಳನ್ನು ಚಟವಾಗಿಸಿಕೊಂಡಿದ್ದು, ಇದರಿಂದ ಸಾವಿರಾರು ಕುಟುಂಬಗಳು ಬೀದಿಪಾಲಾಗುತ್ತಿವೆ. ಸಾಲ ಬಾಧೆಗೆ ಸಿಲಿಕಿದ ಯುವಕರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಈ ಗೇಮಿಂಗ್‌ಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿದರು. ನಂತರ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ರಮೇಶ್ ಬಾಬು ಅವರಿಗೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ನಾಗರಾಜು, ಜಗದೀಶ್, ಸ್ವಾಮಿ, ಕೃಷ್ಣಮೂರ್ತಿ, ಸಿದ್ದರಾಜು, ನಟರಾಜಗೌಡ, ಕೃಷ್ಣ, ಮಹೇಶ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net