ಸಲ್​ ಭೀಮಾ ಸಮರ್ಪಕ ಅನುಷ್ಠಾನಕ್ಕೆ ಆಗ್ರಹ

Demand for adequate implementation of Sal Bhima
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತ ಮುಖಂಡರು ವಿಜಯಪುರದಲ್ಲಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು. ಅರವಿಂದ ಕುಲಕರ್ಣಿ, ಸಂಗಮೇಶ ಸಗರ, ರಾಮನಗೌಡ ಪಾಟೀಲ ಮತ್ತಿತರರಿದ್ದಾರೆ.
Published on

ವಿಜಯಪುರ: ರೈತರ ವಿವಿಧ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ಭಾನುವಾರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ಸಂದ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಾತನಾಡಿ, 2023&24 ನೇ ಫಸಲ್​ ಭೀಮಾ ಯೋಜನೆಯಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆದಿರುವ ಕುರಿತು ಕಳೆದ 3 ತಿಂಗಳಿನಿಂದ ನಿರಂತರ ಹೋರಾಟ ಮಾಡಿ ಪಾರದರ್ಶಕವಾಗಿ ಬೆಳೆ ಸಮೀೆ ಮತ್ತು ಬೆಳೆ ಕಟಾವು ಮಾಡಿದ ಕುರಿತ ವಿವರ ನೀಡಬೇಕಾಗಿದೆ.

ಆದರೆ ಕೃಷಿ, ಕಂದಾಯ, ಪಂಚಾಯತ್​ ರಾಜ್​, ಜಿಲ್ಲಾ ಸಂಖ್ಯಾ ಹಾಗೂ ಜಿಲ್ಲಾಡಳಿತ ಯಾವುದೇ ಮಾಹಿತಿ ನೀಡುತ್ತಿಲ್ಲ, ಕೂಡಲೇ ಎಲ್ಲಾ ದಾಖಲೆಗಳನ್ನು ನೀಡಿ ಪಾರದರ್ಶಕವಾಗಿ ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯಾದ್ಯಂತ ನಡೆಯುತ್ತಿರುವ ನೀರಾವರಿ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿದ್ದು, ತುಬಚಿ&ಬಬಲೇಶ್ವರ, ಮುಳವಾಡ, ಚಿಮ್ಮಲಗಿ, ರೇವಣಸಿದ್ಧೇಶ್ವರ, ಬೂದಿಹಾಳ&ಪೀರಾಪುರ ಸೇರಿದಂತೆ ವಿವಿಧ ಏತ ನೀರಾವರಿ ಯೋಜನೆಗಳು ಸಂಪೂರ್ಣವಾಗಿ ಮುಗಿಸಿ ಭೂಸ್ವಾಧಿನದ ಹಣವನ್ನು ರೈತರಿಗೆ ತ್ವರಿತವಾಗಿ ನೀಡಬೇಕೆಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ವಿದ್ಯುತ್​ ಕಣ್ಣುಮುಚ್ಚಾಲೇ ಆಟ ಆಡುತ್ತಿದ್ದು, ಅದರಿಂದ ರೈತರಿಗೆ ಸಾಕಷ್ಟು ಸಮಸ್ಯೆಗಳಾಗುತ್ತಿದೆ. ಹಗಲು ಮತ್ತು ರಾತ್ರಿ ವೇಳೆ ಸೇರಿ 7 ಂಟೆ ತ್ರೀ ಫೇಸ್​ ಹಾಗೂ ರಾತ್ರಿ ಪೂರ್ತಿ ಸಿಂಗಲ್​ ಫೇಸ್​ ಕರೆಂಟ್​ ನೀಡುವುದು ಹಾಗೂ ಟಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ಅಲ್ಲದೆ, ರಾತ್ರಿ ವೇಳೆ ಕಾಡು ಪ್ರಾಣಿ ಹಾಗೂ ವಿಷಜಂತುಗಳು ಕಡಿತದಿಂದ ಹಲವು ಸಾವುನೋವುಗಳು ಸಂಭವಿಸಿವೆ ಎಂದು ಸಚಿವರಿಗೆ ಮನವರಿಕೆ ಮಾಡಿದರು.

ಜಿಲ್ಲೆಯಲ್ಲಿ ಕೆರೆ ನೀರು ತುಂಬಿಸುವ ಯೋಜನೆಗಳಲ್ಲಿ ಬಾಕಿ ಉಳಿದ ಕೆರೆಗಳನ್ನು ತುಂಬಿಸುವುದು ಸೇರಿ ಮತ್ತಿತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.

ಮುಖಂಡ ಅರವಿಂದ ಕುಲಕರ್ಣಿ, ಜಿಲ್ಲಾ ಸಂಚಾಲಕ ರಾಮನಗೌಡ ಪಾಟೀಲ, ತಾಲೂಕಾ ಅಧ್ಯಕ್ಷ ಮಹಾದೇವಪ್ಪ ತೇಲಿ, ಸಾತಲಿಂಗಯ್ಯ ಸಾಲಿಮಠ, ಮಹಾದೇವ ಕದಂ, ಮಹಾಂತೇಶ ಮಮದಾಪುರ, ಸಂಗಪ್ಪ ಟಕ್ಕೆ, ತಿಪ್ಪರಾಯ ಭೈರೋಡಗಿ, ವಿಠ್ಠಲ ಬಿರಾದಾರ, ಸೋಮನಗೌಡ ಪಾಟೀಲ, ಪ್ರಲ್ಹಾದ ನಾಗರಾಳ, ಸಿದ್ದಪ್ಪ ಕೊಟ್ಟಲಗಿ, ಹೊನ್ನಕೆರಪ್ಪ ತೇಲಗಿ, ಸದಾಶಿವ ಬರಟಗಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net