

ದೊಡ್ಡಬಳ್ಳಾಪುರ : ರೈತರ ಪಂಪ್ ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಸುವಂತೆ ಒತ್ತಾಯಿಸಿ ರೈತ ಸಂದಿಂದ ಬುಧವಾರ ನಗರದ ಕೆಪಿಟಿಸಿಎಲ್ ಕಚೇರಿಗೆ ಮುತ್ತಿಗೆಹಾಕಿ ಪ್ರತಿಭಟನೆ ನಡೆಸಿದರು. ಜಿಲ್ಲಾಧ್ಯಕ್ಷ ಪ್ರಸನ್ನ ಮಾತನಾಡಿ, ರೈತರಿಗೆ 7 ಗಂಟೆ 3 ಫೇಸ್ ವಿದ್ಯುತ್ ಪೂರೈಸುವಂತೆ ಸರ್ಕಾರ ಆದೇಶಿಸಿದೆ. ಆದರೆ, ಕೆಪಿಟಿಸಿಎಲ್ ಅಧಿಕಾರಿಗಳು ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ. 15 ದಿನಗಳಿಂದ ವಿದ್ಯುತ್ ವ್ಯತ್ಯಯದಿಂದಾಗಿ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಮಳೆ ಕೊರತೆ ನಡುವೆ ವಿದ್ಯುತ್ ಅಭಾವದಿಂದ ರೈತರು ಬೆಳೆ ಉಳಿಸಿಕೊಳ್ಳಲು ಪರದಾಡುವಂತಾಗಿದೆ ಎಂದು ದೂರಿದರು. ಡಿ&ಕ್ರಾಸ್ ನಿಂದ ಸರಬರಾಜು ಆಗುವ ತೂಬಗೆರೆ, ದೊಡ್ಡಬೆಳವಂಗಲ, ಕಸಬಾ ಹೋಬಳಿಗಳಲ್ಲಿನ ವಿದ್ಯುತ್ ಸಮಸ್ಯೆ ಸರಿಪಡಿಸಬೇಕು ಎಂದು ಒತ್ತಾಯಿಸಿದರು.
ತಾಲೂಕು ಪ್ರಧಾನ ಕಾರ್ಯದರ್ಶಿ ಸತೀಶ್ ಮಾತನಾಡಿ, ಎರಡು&ಮೂರು ಬಾರಿ ವಿದ್ಯುತ್ ಕಡಿತವಾಗುತ್ತಿದೆ. ಇದರಿಂದ ಸಾಕಷ್ಟು ಪಂಪ್ಸೆಟ್ಗಳು ಸುಟ್ಟು ಹೋಗುತ್ತಿವೆ. ಮೊದಲೇ ವಿದ್ಯುತ್ ಕಡಿತದಿಂದ ತೊಂದರೆ ಅನುಭವಿಸುತ್ತಿರುವ ರೈತರು, ಪಂಪ್ಸೆಟ್ ದುರಸ್ಥಿಗೂ ಹಣ ಖರ್ಚು ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದರು. ರೈತರ ಮನವಿ ಸ್ವೀಕರಿಸಿ ಮಾತನಾಡಿದ ಕೆಪಿಟಿಸಿಎಲ್ ತಾಲೂಕು ಎಇಇ ಲಕ್ಷ$್ಮಣ್, 20 ದಿನಗಳಿಂದ ಡಿ.ಕ್ರಾಸ್ನಲ್ಲಿನ ಟ್ರಾನ್ಸ್ಾರ್ಮರ್ ದುರಸ್ತಿಯಾಗಿದೆ. ಇದಕ್ಕೆ ಸಂಬಂಧಿಸಿದ ಉಪಕರಣಗಳನ್ನ ಎಲೆಕ್ಟ್ರಾನಿಕ್ ಸಿಟಿಯಿಂದ ತರಿಸಲಾಗುತ್ತಿದೆ. ಹಾಗಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಮುಂದಿನ ವಾರದೊಳಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.