ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯ

6sri-1 (1)
ಸಮರ್ಪಕ ವಿದ್ಯುತ್ ಪೂರೈಕೆಗೆ ಒತ್ತಾಯಿಸಿ ತಾಲೂಕು ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಮೆಸ್ಕಾಂ ಎಇಇ ದೀಪಕ್‌ಗೆ ಮನವಿ ಸಲ್ಲಿಸಿದರು. ರಾಜೇಶ್, ಬಿ.ಶಿವಶಂಕರ್, ಶಿಲ್ಪಾ, ಮಂಜುನಾಥ್ ಇದ್ದರು.
Published on

ಶೃಂಗೇರಿ: ಸಮರ್ಪಕ ವಿದ್ಯುತ್ ಪೂರೈಸಬೇಕು ಎಂದು ಒತ್ತಾಯಿಸಿ ತಾಲೂಕು ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಶನಿವಾರ ಮೆಸ್ಕಾಂ ಎಇಇ ದೀಪಕ್‌ಗೆ ಮನವಿ ಸಲ್ಲಿಸಿದರು.
ತಾಲೂಕು ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಮೇಗಳಬೈಲು ರಾಜೇಶ್ ಮಾತನಾಡಿ, ಮಲೆನಾಡಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಾಗುತ್ತಿದೆ. ಜತೆಗೆ ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ರೈತರ ಕೃಷಿ ಕಾರ್ಯಕ್ಕೆ ಹಿನ್ನಡೆಯಾಗುತ್ತಿದೆ. ಒಂದು ಕಡೆ ಹಳ್ಳಕೊಳ್ಳಗಳಲ್ಲಿ ನೀರಿನ ಅಭಾವ ಎದ್ದು ಕಾಣುತ್ತಿದ್ದು ಕೃಷಿಕರಿಗೆ ಆಗುವ ತೊಂದರೆ ಸರಿಪಡಿಸಿಕೊಡಬೇಕು ಎಂದರು.
ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ರಂಗನಾಥ್ ಮಾತನಾಡಿ, ವಿದ್ಯುತ್ ವ್ಯತ್ಯಯದಿಂದ ಗ್ರಾಮೀಣ ಪ್ರದೇಶಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಎದುರಾಗುತ್ತಿದೆ. ತುರ್ತು ಸಂದರ್ಭದಲ್ಲಿ ನೆಟ್‌ವರ್ಕ್ ಸಮಸ್ಯೆಯಿಂದ ಸಂಪರ್ಕ ಸಾಧಿಸಲು ಆಗುತ್ತಿಲ್ಲ. ಸಮಪರ್ಕವಾಗಿ ವಿದ್ಯುತ್ ಪೂರೈಸದಿರುವುದರಿಂದ ರೈತರ ಬೆಳೆಗಳು ಒಣಗುತ್ತಿವೆ. ಮೋದಲೇ ರೋಗಬಾಧಿತ ತೋಟದ ಬೆಳೆಗಳನ್ನು ಉಳಿಸಿಕೊಳ್ಳಲು ಕ್ಷಣ ಕ್ಷಣವೂ ಹೋರಾಡುತ್ತಿರುವ ರೈತರ ಬದುಕು ಅತಂತ್ರವಾಗಿದೆ ಎಂದರು.
ಬಿಜೆಪಿ ಎಸ್ಸಿ ಮೋರ್ಚಾ ವಕ್ತಾರ ಬಿ.ಶಿವಶಂಕರ್, ಪ್ರಧಾನ ಕಾರ್ಯದರ್ಶಿ ಕೊಚ್ಚವಳ್ಳಿ ಶಿವಣ್ಣ, ಮಂಡಲದ ಪ್ರಧಾನ ಕಾರ್ಯದರ್ಶಿ ನೂತನ್ ಕುಮಾರ್, ತಾಲೂಕು ಬಿಜೆಪಿ ವಕ್ತಾರ ದಿನೇಶ್ ಅಂಗುರ್ಡಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯೆ ಶಿಲ್ಪಾ ಮಂಜುನಾಥ್, ಬಿಜೆಪಿ ಮುಖಂಡರಾದ ತೆಕ್ಕೂರು ಹಾಲಪ್ಪ ಗೌಡರು, ಚೇತನ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net