

ಗುಂಡ್ಲುಪೇಟೆ: ಸರ್ಕಾರವು ಬಹು ರಾಷ್ಟ್ರೀಯ ಕಂಪನಿಗಳ ಲಾಭಿಗೊಳಗಾಗಿ ಕುಲಾಂತರಿ ಬಿತ್ತನೆ ಬೀಜಗಳನ್ನು ಹೇರಲು ಹೊರಟಿರುವುದನ್ನು ವಿರೋಧಿಸಿ ರೈತ ಸಂಘದ ಕಾರ್ಯಕರ್ತರು ಇತ್ತೀಚೆಗೆ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು
ಸಾಮೂಹಿಕ ನಾಯಕತ್ವದ ರೈತ ಸಂಘಟನೆಯ ತಾಲೂಕು ಅಧ್ಯಕ್ಷ ನಾಗಪ್ಪ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿದ ಕಾರ್ಯಕರ್ತರು, ಸಾರಿಗೆ ಬಸ್ ನಿಲ್ದಾಣದ ಎದುರು ಮಾನವ ಸರಪಳಿ ರಚಿಸಿ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿದರು. ನಂತರ ತಾಲೂಕು ಕಚೇರಿಗೆ ತೆರಳಿ ಕುಲಾಂತರಿ ತಳಿಗಳ ಬಳಕೆ ನಿಷೇಧಿಸುವಂತೆ ಅಧಿಕಾರಿಗಳ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಕಾರ್ಯದರ್ಶಿ ಸ್ವಾಮಿ ಸೇರಿದಂತೆ ಹಲವರು ಇದ್ದರು.