

ವಿಜಯಪುರ: ಸ್ಟೇಷನ್ ಬೇಲ್ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ ಲಂಚ ಪಡೆಯುತ್ತಿದ್ದ ಇಬ್ಬರು ಪೊಲೀಸ್ ಕಾನ್‌ಸ್ಟೇಬಲ್‌ಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.
ನಗರದ ಗೋಳಗುಮ್ಮಟ ಠಾಣೆಗೆ ಪೊಲೀಸ್ ಕಾನ್‌ಸ್ಟೇಬಲ್ ಹನುಮಂತ ಪೂಜಾರಿ ಮತ್ತು ಜಟ್ಟೆಪ್ಪ ಬಿರಾದಾರ ಲೋಕಾಯುಕ್ತದ ಬಲೆಗೆ ಬಿದ್ದವರು. ಗಲಾಟೆಗೆ ಸಂಬಂಧಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಿಗೆ ಸ್ಟೇಷನ್ ಬೇಲ್ ನೀಡಲು 50 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇರಿಸಿದ್ದರು. ಅದರಲ್ಲಿ ಮಂಗಳವಾರ ರಾತ್ರಿ 40 ಸಾವಿರ ರೂಪಾಯಿ ಪಡೆಯುತ್ತಿದ್ದಾಗ ಲೋಕಾಯುಕ್ತರ ಕೈಗೆ ಸಿಕ್ಕಿ ಬಿದ್ದಿದ್ದಾರೆ.
ಲೋಕಾಯುಕ್ತ ಎಸ್‌ಪಿ ಟಿ.ಮಲ್ಲೇಶ, ಡಿವೈಎಸ್‌ಪಿ ಸುರೇಶ ರೆಡ್ಡಿ, ಇನ್‌ಸ್ಪೆಕ್ಟರ್ ಆನಂದ ಠಕ್ಕನವರ, ಎ.ಎ. ಡೋಣಿ ನೇತೃತ್ವದಲ್ಲಿ ದಾಳಿ ನಡೆದಿದೆ. ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.