ವಿಧಾನ ಪರಿಷತ್ ಸದಸ್ಯತ್ವ ರದ್ದುಗೆ ಆಗ್ರಹ

Published on

ಬಳ್ಳಾರಿ ; ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹಾಗೂ ಸದಸ್ಯ ಕೆ.ರವಿಕುಮಾರ ಸದಸ್ಯತ್ವ ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಮಂಗಳವಾರ ಪ್ರತಿಭಟನೆ ನಡೆಯಿತು.

ದಲಿತ, ಹಿಂದುಳಿದ, ಅಲ್ಪಸಂಖ್ಯಾತರ, ನಾಯಕರ ಏಳಿಗೆಯನ್ನು ಸಹಿಸದ ಬಿಜೆಪಿ ಪಕ್ಷದ ದಲಿತ ವಿರೋಧಿ ನೀತಿಯನ್ನು ಸಂಘಟನೆ ಖಂಡಿಸಿದೆ. ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ನಾಯಿಗೆ ಹೋಲಿಕೆ ಮಾಡಿದ್ದಾರೆ. ಅಲ್ಲದೆ, ವಿಧಾನ ಪರಿಷತ್ ಕೆ.ರವಿಕುಮಾರ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನದಿಂದ ಬಂದವರಂತೆ ಕಾಣಿಸುತ್ತಿದೆ ಎಂದು ಹೇಳಿಕೆ ನೀಡಿ ಅಪಮಾನಿಸಿದ್ದಾರೆ. ಈ ಹೇಳಿಕೆ ಬಗ್ಗೆ ರವಿಕುಮಾರ್‌ಗೆ ಹೈಕೋರ್ಟ್ ಕ್ಷಮೆಯಾಚಿಸುವಂತೆ ತಾಕೀತು ಮಾಡಿದೆ. ಆದ್ದರಿಂದ, ಇಬ್ಬರ ನಾಯಕರ ವಿಧಾನ ಪರಿಷತ ಸ್ಥಾನವನ್ನು ರದ್ದುಗೊಳಿಸಿ ಹಾಗೂ ಕಾನೂನು ಕ್ರಮಜರುಗಿಸಬೇಕು ಎಂದು ಸಂಘಟನಕಾರರು ಒತ್ತಾಯಿಸಿದರು.

ಇಲ್ಲಿನ ರಾಯಲ್ ವೃತ್ತದಿಂದ ಡಿಸಿ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಸಿ ಬಿಜೆಪಿ ಹಾಗೂ ಇಬ್ಬರ ವಿರುದ್ಧ ಘೋಷಣೆ ಕೂಗಿ ಅಕ್ರೋಶ ಹೊರಹಾಕಿದರು.ಬಳಿಕ ಡಿಸಿ ಪ್ರಶಾಂತ ಕುಮಾರ ಮಿಶ್ರಾ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net