ರೈತರಿಗೆ ಪರಿಹಾರ ನೀಡಲು ಆಗ್ರಹ

19blh4 ಮಹಾಂತೇಶ ಕೌಜಲಗಿ
Published on

ಬೆಲಹೊಂಗಲ: ಮುಂಗಾರು ಹಂಗಾಮಿನಲ್ಲಿ ಬೆಳೆದ ಸೋಯಾಬೀನ್​ ಬೆಳೆಗೆ ಕೀಟಬಾಧೆ ತೀವ್ರವಾಗಿ ಕಾಡುತಿದ್ದು, ಬೆಲಹೊಂಗಲ, ಕಿತ್ತೂರು, ಸವದತ್ತಿ, ರಾಮದುರ್ಗ, ಯರಗಟ್ಟಿ ತಾಲೂಕುಗಳಲ್ಲಿ ಬೆಳೆ ನಷ್ಟ ಅನುಭವಿಸುತ್ತಿರುವ ರೆತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಶಾಸಕ ಮಹಾಂತೇಶ ಕೌಜಲಗಿ ವಿಧಾನಸಭೆ ಕಲಾಪದಲ್ಲಿ ಕಷಿ ಸಚಿವ ಚೆಲುವರಾಯಸ್ವಾಮಿ ಅವರನ್ನು ಒತ್ತಾಯಿಸಿದರು. ವಿಧಾನಸಭೆ ಕಲಾಪದ ಶೂನ್ಯ ವೇಳೆಯಲ್ಲಿ ಅವರು ಈ ವಿಷಯ ಪ್ರಸ್ತಾಪಿಸಿದರು.ಕೃಷಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿ, ಸೋಯಾಬೀನ್​ ಬೆಳೆ ನಾಶದ ಕುರಿತು ನಮ್ಮ ಗಮನಕ್ಕೆ ಬಂದಿದೆ. ಅಧಿಕಾರಿಗಳು, ಕಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳಿಗೆ ಅತಿವಷ್ಟಿಯಿಂದ ಹಾನಿಗೀಡಾದ ಪ್ರದೇಶದಲ್ಲಿ ಸಮೀೆ ನಡೆಸಲು ತಿಳಿಸಲಾಗಿದೆ. ಶ್ರೀದಲ್ಲಿ ಪರಿಹಾರ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net