ಬೆಳೆಹಾನಿ ಪರಿಹಾರ, ಮೇವು ಪೂರೈಸುವಂತೆ ಆಗ್ರಹ

Screenshot_2023-07-17-16-23-40-44.jpg
Published on

ಬೆಳಗಾವಿ: ಈ ಬಾರಿ ಮುಂಗಾರು ಮಳೆ ಕ್ಷೀಣವಾಗಿದ್ದು, ಬಿತ್ತನೆ ಮಾಡಿದ ಬೆಳೆಗಳು ನಾಶವಾಗಿವೆ. ಸರ್ಕಾರ ರೈತರಿಗೆ ಪರಿಹಾರ ಘೋಷಣೆ ಮಾಡಬೇಕು. ಗೋಶಾಲೆಗಳ ಮೂಲಕ ರೈತರಿಗೆ ಅಗತ್ಯ ಮೇವು ಪೂರೈಕೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಯಬಾಗ ತಾಲೂಕು ಘಟಕದಿಂದ ಜಿಪಂ ಸಿಇಒ ಅವರಿಗೆ ಮನವಿ ಸಲ್ಲಿಸಿದರು.
ಮುಂಗಾರು ಬೆಳೆ ನಾಶಕ್ಕೆ ಸೂಕ್ತವಾದ ಪರಿಹಾರ ಘೋಷಣೆ ಮಾಡಬೇಕು. ಕುಡಿಯುವ ನೀರು ಪೂರೈಸಬೇಕು. ಇಂತಹ ಪರಿಸ್ಥಿತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಮುಂದುವರಿಸಬೇಕು. ಕೃಷಿ ಹೊಂಡಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಿರ್ಮಿಸಿ ಅನುಕೂಲ ಕಲ್ಪಿಸಬೇಕು. ಕೆರೆ ತುಂಬಿಸುವಂತ ಯೋಜನೆ ಕೈಗೊಳ್ಳಬೇಕು. ಜತೆಗೆ ಹಳ್ಳಿ ರಸ್ತೆಗಳನ್ನು ದುರಸ್ತಿ ಮಾಡಿ ರೈತಾಪಿ ವರ್ಗಕ್ಕೆ ಅನಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.
ಚೂನಪ್ಪ ಪೂಜಾರಿ, ರಾಘವೇಂದ್ರ ನಾಯಕ, ಮಹಾದೇವ ಹೊಳಕರ, ಮಾಯಪ್ಪ ಸವಸುದ್ದಿ, ಸುರೇಶ ಗಾಡಿವಡ್ಡರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net