ರೈತರ ಖಾತೆಗೆ ಪರಿಹಾರ ಜಮೆ ಮಾಡಿ: ರೈತ ಸಂಘದ ಮುಖಂಡ ಕಿರಂಗೂರು ಪಾಪು ಒತ್ತಾಯ

Demand for crop compensation mandya
Published on

ಮಂಡ್ಯ: ಶೀಘ್ರವೇ ಬೆಳೆ ಒಣಗಿ ನಷ್ಟವಾಗಿರುವ ಬರ ಪರಿಹಾರವನ್ನು ರೈತರ ಖಾತೆಗೆ ಜಮೆ ಮಾಡಬೇಕೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ರೈತಸಂಘದ ಮುಖಂಡ ಕಿರಂಗೂರು ಪಾಪು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರ ‘ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ’ಯಂತೆ ಬರಪರಿಹಾರ ನೀಡಿರುವುದು ತರವಲ್ಲ. ರಾಜ್ಯ ಸರ್ಕಾರಕ್ಕೆ ತಾರತಮ್ಯ ನೀತಿ ಅನುಸುತ್ತಿರುವುದು ಕೇಂದ್ರಕ್ಕೆ ಶೋಭೆಯಲ್ಲ. ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಪದೆ ಪದೇ ಬಂದ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಬರ ಪರಿಹಾರ, ರೈತರ ಸಂಕಷ್ಟ, ನೀರಿನ ವಿಷಯ, ಸಾಲಮನ್ನಾ ವಿಷಯದ ಬಗ್ಗೆ ಚಕಾರ ಎತ್ತದೆ ಮೌನ ವಹಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ರೈತರು ನೀರು ಇಲ್ಲದೆ, ಮಳೆಯೂ ಇಲ್ಲದೆ ಬೆಳೆ ನಷ್ಟದಿಂದ ತತ್ತರಿಸಿ ಹೋಗಿದ್ದಾರೆ. ರೈತರ ಬದುಕು ಶೋಚನೀಯವಾಗಿದೆ. ಬರಪರಿಹಾರವನ್ನು ತ್ವರಿತಗತಿಯಲ್ಲಿ ಸಮೀಕ್ಷೆ ಮಾಡಿ ರಾಜ್ಯದ ಬೆಳೆ ನಷ್ಟದ ವರದಿಯನ್ನು ಕೇಂದ್ರಕ್ಕೆ ಕಳುಹಿಸಿದರೂ ಸರ್ಕಾರವು ಇಂತಹ ಸಂದರ್ಭದಲ್ಲಿ ಕೂಡಲೇ ರಾಜ್ಯ ಸರ್ಕಾರ ಕೋರಿರುವ ಪರಿಹಾರದ ಮೊತ್ತವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net