ಬರಪೀಡಿತ ಪ್ರದೇಶವೆಂದು ಘೊಷಿಸಲು ಆಗ್ರಹ

HEBBAR
Published on

ಯಲ್ಲಾಪುರ: ಪಟ್ಟಣದ ಅರಣ್ಯ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿದ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಶಾಸಕ ಶಿವರಾಮ ಹೆಬ್ಬಾರ್ ಭೇಟಿಯಾದರು. ಸಚಿವರಿಗೆ ಶಾಲು ಹೊದೆಸಿ ಗೌರವಿಸಿ, ಕ್ಷೇತ್ರದ ಸಮಸ್ಯೆಗಳ ಕುರಿತು ವಿವರಿಸಿದರು. ಜಿಲ್ಲೆಯ ಘಟ್ಟದ ಮೇಲಿನ ತಾಲೂಕುಗಳಾದ ಯಲ್ಲಾಪುರ, ಮುಂಡಗೋಡ, ಶಿರಸಿ, ಹಳಿಯಾಳ, ಸಿದ್ದಾಪುರ, ದಾಂಡೇಲಿ, ಜೊಯಿಡಾ ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೊಷಿಸಬೇಕೆಂದು ಆಗ್ರಹಿಸಿದರು. ಇದಕ್ಕೆ ಸ್ಪಂದಿಸಿದ ಸಚಿವರು, ಪರಿಶೀಲಿಸಿ, ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಉಪವಿಭಾಗಾಧಿಕಾರಿ ದೇವರಾಜ ಆರ್., ಜಿಪಂ ಮಾಜಿ ಸದಸ್ಯ ವಿಜಯ ಮಿರಾಶಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net