ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ದೊಡ್ಡಿಂದುವಾಡಿಯಲ್ಲಿರುವ ವಿದ್ಯುತ್ ವಿತರಣಾ ಕೇಂದ್ರ ಕಚೇರಿ ಮುಂಭಾಗದಲ್ಲಿ ರೈತ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ದೊಡ್ಡಿಂದುವಾಡಿಯಲ್ಲಿರುವ ವಿದ್ಯುತ್ ವಿತರಣಾ ಕೇಂದ್ರ ಕಚೇರಿ ಮುಂಭಾಗದಲ್ಲಿ ರೈತ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
Published on

ಕೊಳ್ಳೇಗಾಲ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ವಿದ್ಯುತ್ ವಿತರಣಾ ಕೇಂದ್ರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಸೆಸ್ಕ್ ಅಧಿಕಾರಿಗಳ ವಿರುದ್ಧ ರೈತರು ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮಾಂತರ ಪ್ರದೇಶದ ತೋಟದ ಮನೆಗಳಿಗೆ ಸಂಜೆ 6 ರಿಂದ ಬೆಳಗಿನ ಜಾವ 6 ಗಂಟೆವರೆಗೆ ವಿದ್ಯುತ್ ಕಡಿತ ಮಾಡುವುದನ್ನು ನಿಲ್ಲಿಸಬೇಕು. ಜತೆಗೆ ನಿರಂತರವಾಗಿ ವಿದ್ಯುತ್ ಪೂರೈಕೆ ಮಾಡಬೇಕು. ಅಕ್ರಮ ಸಕ್ರಮ ಯೋಜನೆಯನ್ನು ಹಿಂದಿನ ರೀತಿಯಲ್ಲಿ ಮುಂದುವರಿಸಬೇಕು. ಕಬ್ಬಿಣದ ಕಂಬಗಳ ಬದಲಿಗೆ ಸಿಮೆಂಟ್ ಕಂಬಗಳನ್ನು ಸ್ಥಾಪಿಸಬೇಕು. ಜೋತು ಬಿದ್ದಿರುವ ಲೈನ್‌ಗಳನ್ನು ಸರಿಪಡಿಸಬೇಕು. ಸರಿಪಡಿಸದಿದ್ದರೆ ಸಂಬಂಧ ಪಟ್ಟವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಎಚ್ಚರಿಸಿದರಲ್ಲದೆ, ಗ್ರಾಹಕರ ಕರೆ ಸ್ವೀಕರಿಸದ ಸೆಸ್ಕ್ ಸಿಬ್ಬಂದಿವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದಯ ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ಸೆಸ್ಕ್ ಇಇ ತಬಸ್ಸು ಅಬ್ಜಾ ಮಾತನಾಡಿ, ತೋಟದ ಮನೆಗಳಿಗೆ ಸಂಜೆ 6ರಿಂದ ಬೆಳಗಿನ ಜಾವ 6 ಗಂಟೆವರೆಗೆ ವಿದ್ಯುತ್ ನೀಡಲಾಗುವುದು. ದೊಡ್ಡಿಂದುವಾಡಿ ವ್ಯಾಪ್ತಿಯಲ್ಲಿ ಜೋತು ಬಿದ್ದಿರುವ ವಿದ್ಯುತ್ ತಂತಿಗಳನ್ನು ತುರ್ತಾಗಿ ಸರಿಡಿಸಿಕೊಡಲಾಗುವುದು. ಕಬ್ಬಿಣದ ವಿದ್ಯುತ್‌ಕಂಬ ಬದಲಾವಣೆ ಸೇರಿದಂತೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶೈಲೇಂದ್ರ, ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಾಸ್ಕರ್, ಜಿಲ್ಲಾ ಕಾಯಂ ಸದಸ್ಯ ರವಿನಾಯ್ಡು, ತಾಲೂಕು ಕಾರ್ಯಾಧ್ಯಕ್ಷ ಪೊನ್ನಸ್ವಾಮಿ, ತಾಲೂಕು ಪ್ರಭಾರ ಅಧ್ಯಕ್ಷರ ಚಾರ್ಲಿ, ಪ್ರಧಾನ ಕಾರ್ಯದರ್ಶಿ ಪೆರಿಯಾ ನಾಯಗಂ, ದೊಡ್ಡಿಂದುವಾಡಿ ಗ್ರಾಮ ಘಟಕ ಅಧ್ಯಕ್ಷ ವಸಂತಕುಮಾರ್, ಸಿಂಗನಲ್ಲೂರು ಗ್ರಾಮ ಘಟಕ ಅಧ್ಯಕ್ಷ ಬೆಟ್ಟೇಗೌಡ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net