ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

25blrp1
ರಾಜ್ಯ ಸರ್ಕಾರಿ ಕ್ಷೇಮಾಭಿವೃದ್ಧಿ ದಿನಗೂಲಿ ನೌಕರರ ಮಹಾ ಮಂಡಲ ಪದಾಧಿಕಾರಿಗಳು ಬೇಲುರಲ್ಲಿ ತಹಸೀಲ್ದಾರ್ ಗ್ರೇಡ್-2 ಅಶೋಕ್‌ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
Published on

ಬೇಲೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಕ್ಷೇಮಾಭಿವೃದ್ಧಿ ದಿನಗೂಲಿ ನೌಕರರ ಮಹಾ ಮಂಡಲದ ತಾಲೂಕು ಪದಾಧಿಕಾರಿಗಳು ಗುರುವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ತಾಲೂಕು ಅಧ್ಯಕ್ಷ ಸೋಮೇಗೌಡ ಮಾತನಾಡಿ, ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕ್ಷೇಮಾಭಿವೃದ್ಧಿ ದಿನಗೂಲಿ ಮತ್ತು ನಿವೃತ್ತ ನೌಕರರು 35 ವರ್ಷಗಳಿಂದ ಸರ್ಕಾರಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಈವರೆಗೂ ವೈದ್ಯಕೀಯ, ವಿಮೆ, ಪಿಂಚಣಿ, ಜೀವ ಸಂಜೀವಿನಿ, ಅನುಕಂಪದ ನೌಕರಿ ಸೇರಿದಂತೆ ಯಾವುದೇ ಸವಲತ್ತು ದೊರೆಯುತ್ತಿಲ್ಲ. ಆದ್ದರಿಂದ ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳು ಕ್ಷೇಮಾಭಿವೃದ್ಧಿ ದಿನಗೂಲಿ ನೌಕರರ ಬೇಡಿಕೆಗೆ ಸ್ಪಂದಿಸಿ ನೌಕರರ ಹಿತ ಕಾಪಾಡಲು ಮುಂದಾಗಬೇಕು ಎಂದು ಮನವಿ ಮಾಡಿದರು.

ತಹಸೀಲ್ದಾರ್ ಗ್ರೇಡ್-2 ಅಶೋಕ್ ಕುಮಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ರಾಜ್ಯ ಸರ್ಕಾರಿ ಕ್ಷೇಮಾಭಿವೃದ್ಧಿ ದಿನಗೂಲಿ ನೌಕರರ ಮಹಾ ಮಂಡಲ ಗೌರವಾಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ಕೇಶವಮೂರ್ತಿ, ಕಾರ್ಯದರ್ಶಿ ಬಸವಲಿಂಗಪ್ಪ, ಖಜಾಂಚಿ ಬೋಮ್ಮೇಗೌಡ ಸೇರಿದಂತೆ ಇತರರಿದ್ದರು.

.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net