ಹೆಬ್ರಿ- ಕಾರ್ಕಳಕ್ಕೆ ಸರ್ಕಾರಿ ಬಸ್‌ಗೆ ಬೇಡಿಕೆ

HBR
Published on

ವಿಜಯವಾಣಿ ಸುದ್ದಿಜಾಲ ಹೆಬ್ರಿ

ಹೆಬ್ರಿಯಿಂದ ಮುದ್ರಾಡಿ, ಕಬ್ಬಿನಾಲೆ, ಮುನಿಯಾಲು, ಅಂಡಾರು ಶಿರ್ಲಾಲು, ಕೆರ್ವಾಶೆ ಮಾರ್ಗವಾಗಿ ಸರ್ಕಾರಿ ಬಸ್‌ಗಳನ್ನು ಓಡಿಸುವಂತೆ ಹೆಬ್ರಿ ತಾಲೂಕು ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಅಧ್ಯಕ್ಷ ಶಂಕರ ಶೇರಿಗಾರ್ ಮನವಿ ಮಾಡಿದರು.

ಬುಧವಾರ ಹೆಬ್ರಿ ಸಮಾಜ ಮಂದಿರದಲ್ಲಿ ಹೆಬ್ರಿ ತಾಲೂಕು ಗ್ಯಾರಂಟಿ ಯೋಜನೆಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹೆಬ್ರಿ- ಬ್ರಹ್ಮಾವರ ಮಾರ್ಗವಾಗಿ ಸಂಚರಿಸುತ್ತಿದ್ದ ಸರ್ಕಾರಿ ಬಸ್‌ಗಳನ್ನು ನಿಲ್ಲಿಸಲಾಗಿದ್ದು ಪುನರಾರಂಭಿಸಬೇಕು ಎಂದು ಶಂಕರ ಶೇರಿಗಾರ್ ಮನವಿ ಮಾಡಿದರು. ಹೆಬ್ರಿ ಇಒ ವಿಜಯಾ, ಗ್ಯಾರಂಟಿ ಸಮಿತಿಯ ಸದಸ್ಯರಾದ ಪ್ರವೀಣ್ ಸೂಡ, ರಾಜು ಪೂಜಾರಿ, ಜಗದೀಶ ಹೇರಳೆ, ರಘುನಾಥ ಪೂಜಾರಿ, ಶಶಿಕಲಾ ಆರ್.ಪಿ., ಸಾವಿತ್ರಿ ನಾಯ್ಕ, ವಸಂತ ಪೂಜಾರಿ ಭಾಗವಹಿಸಿದ್ದರು.

ಮೆಸ್ಕಾಂ, ಕೆಎಸ್‌ಆರ್‌ಟಿಸಿ, ಆಹಾರ ಮತ್ತು ನಾಗರಿಕ ಪೂರೈಕೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net