ಒಳಮೀಸಲಾತಿ ಅನುಷ್ಠಾನಗೊಳಿಸಲು ಆಗ್ರಹ

HKR AGRAHA
Published on

ಹಿರೇಕೆರೂರ: ಹೊರರಾಜ್ಯಗಳಂತೆ ಕರ್ನಾಟಕ ರಾಜ್ಯದಲ್ಲಿಯೂ ಸಂಪೂರ್ಣ ಒಳಮೀಸಲಾತಿ ಅನುಷ್ಠಾನಗೊಳಿಸಬೇಕು ಎಂದು ತಾಲೂಕು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಗಂಗಾಧರ ಭೋಗೇರ ಆಗ್ರಹಿಸಿದ್ದಾರೆ.

ಈ ಕುರಿತು ಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಈಗಾಗಲೇ ಸುಪ್ರೀಂ ಕೋರ್ಟಿನ ಆದೇಶದಂತೆ ನೆರೆಯ ರಾಜ್ಯಗಳು ಸಂಪೂರ್ಣ ಒಳಮೀಸಲಾತಿ ಜಾರಿಗೊಳಿಸಿವೆ. ರಾಜ್ಯ ಸರ್ಕಾರ ಒಳ ಮೀಸಲಾತಿ ತರಲು ದತ್ತಾಂಶದ ನೆಪವೊಡ್ಡುತ್ತಿರುವುದು ಎಷ್ಟರಮಟ್ಟಿಗೆ ಸರಿ? ಸರ್ಕಾರದ ಪರವಾಗಿ ನಿಂತ ವ್ಯಕ್ತಿಗಳು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದು, ಸಮುದಾಯವನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇಂಥಹ ಮಾತಿಗೆ ಕಿವಿಗೊಡದೆ, ನಮ್ಮ ಸಮುದಾಯದ ತುತ್ತು ಬುತ್ತಿಗೆ ಹಾಗೂ ಮುಂದಿನ ಪೀಳಿಗೆಯ ಭವಿಷ್ಯಕ್ಕಾಗಿ ಒಳಮೀಸಲಾತಿಯನ್ನು ಕೂಡಲೇ ಜಾರಿಗೆ ತರಲು ಸರ್ಕಾರದ ಮೇಲೆ ಒತ್ತಡ ಹೇರಲು, ಮಾಡು ಇಲ್ಲವೆ ಮಡಿ ಎಂಬಂತೆ ಆ. 1ರಂದು ಬೆಳಗ್ಗೆ 11 ಗಂಟೆಗೆ ರಾಜ್ಯದ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು. ಜನಸಮುದಾಯ ಒಗ್ಗಟ್ಟಿನಿಂದ ಹೋರಾಟದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net