

ಹುಬ್ಬಳ್ಳಿ: ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನಗರದ ಸರ್. ಸಿದ್ದಪ್ಪ ಕಂಬಳಿ ಪುತ್ಥಳಿ ಮುಂದೆ ಕಳಸಾ-ಬಂಡೂರಿ ಹೋರಾಟ ಸಮಿತಿ ಪದಾಧಿಕಾರಿಗಳು ಗುರುವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದರು.
ನ್ಯಾಯಾಧಿಕರಣ ನೀರು ಹಂಚಿಕೆ ಕುರಿತು ತೀರ್ಪು ನೀಡಿದೆ. ಆದರೆ, ಗೋವಾ ಸರ್ಕಾರ ಕ್ಯಾತೆ ಮುಂದುವರಿಸಿದೆ. ಕೇಂದ್ರ ಸರ್ಕಾರ ಈ ವಿಷಯದಲ್ಲಿ ತಾರತಮ್ಯ ಧೋರಣೆ ಅನುಸರಿಸುತ್ತಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಬಹಳ ನಿರ್ಲಕ್ಷೃ ವಹಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸಮಿತಿ ಅಧ್ಯಕ್ಷ ಸಿದ್ದು ತೇಜಿ, ಪ್ರಮುಖರಾದ ಬಾಬಾಜಾನ್ ಮುಧೋಳ, ರವಿ ಕಂಬಳಿ, ಬಿ.ಎಂ. ಹುಣಸಿ, ರಾಜು ನಾಯಕವಾಡಿ, ಮಾಣಿಕ್ಯ ಚಿಲ್ಲೂರ, ಬಿ.ಎ. ಮುಧೋಳ, ಹನುಮಂತಪ್ಪ ಪವಾಡಿ, ರಮೇಶ ಭೋಸ್ಲೆ, ಎಸ್.ಬಿ. ಪಾಟೀಲ ಇತರರು ಇದ್ದರು.