ಬಾದಾಮಿಯಲ್ಲಿ ಇಮ್ಮಡಿ ಪುಲಕೇಶಿ ಪ್ರತಿಮೆ ಸ್ಥಾಪನೆಗೆ ಒತ್ತಾಯ

Immadi_Pulikeshi
Published on

ಮೈಸೂರು: ರಾಜ್ಯ ಸರ್ಕಾರ ಬಾದಾಮಿಯಲ್ಲಿ ಚಾಲುಕ್ಯರ ದೊರೆ ಇಮ್ಮಡಿ ಪುಲಕೇಶಿ ಪ್ರತಿಮೆ ಸ್ಥಾಪಿಸಬೇಕು ಎಂದು ಕದಂಬ ಸೈನ್ಯ ಸಂಘಟನೆಯ ರಾಜ್ಯಾಧ್ಯಕ್ಷ ಕೆ. ಬೇಕ್ರಿ ರಮೇಶ್ ಆಗ್ರಹಿಸಿದರು.

ಬಿಜೆಪಿ ಹಾಗೂ ಕಾಂಗ್ರೆಸ್ ಮಹಾರಾಜ ಶಿವಾಜಿ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪ್ರತಿಮೆ ಸ್ಥಾಪನೆಗೆ ತೋರುವ ಆಸಕ್ತಿಯನ್ನು ಕನ್ನಡಿಗ ದೊರೆಗಳ ಪ್ರತಿಮೆ ನಿರ್ಮಾಣಕ್ಕೆ ಏತಕ್ಕೆ ಆಸಕ್ತಿ ತೋರುತ್ತಿಲ್ಲ. ಚಾಲುಕ್ಯರ ರಾಜಧಾನಿ ಬಾದಾಮಿಯಲ್ಲಿ ಇಮ್ಮಡಿ ಪುಲಿಕೇಶಿ ಪ್ರತಿಮೆ ಸ್ಥಾಪಿಸುವಂತೆ ಮೂರು ದಶಕಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಈ ಬಗ್ಗೆ ಆಸಕ್ತಿ ತೋರುತ್ತಿಲ್ಲ. ರಾಜ್ಯದ ಮೂರು ಪ್ರಮುಖ ಪಕ್ಷಗಳಿಗೆ ಕನ್ನಡ ನಾಡು, ನುಡಿ ವಿಚಾರದಲ್ಲಿ ಬದ್ಧತೆ ಇಲ್ಲ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಚಾಲಕ ಎಸ್.ಶಿವಕುಮಾರ್, ಸಹಕಾರ್ಯದರ್ಶಿಗಳಾದ ಉಮ್ಮಡಹಳ್ಳಿ ನಾಗೇಶ್, ಬಿ.ಶಿವಕುಮಾರ್, ನಗರ ಕಾರ್ಯದರ್ಶಿಗಳಾದ ಪುಟ್ಟಸ್ವಾಮಿ, ನಾ.ಮಹದೇವಸ್ವಾಮಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net