

ಹೊಸಪೇಟೆ: ನಗರಸಭೆ ವ್ಯಾಪ್ತಿಯ ಸಂಗೊಳ್ಳ ರಾಯಣ್ಣ ರಚಿಸಿ, ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡಬೇಕು ಎಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘÀರ್ಜನೆ ತಾಲೂಕು ಘಟಕ ಒತ್ತಾಯಿಸಿದೆ.
ಈ ಕುರಿತು ನಗರಸಭೆ ಪೌರಾಯುಕ್ತರು ಮತ್ತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ, ಭಾರತ ಸ್ವಾತಂತ್ರಕ್ಕಾಗಿ ತಮ್ಮ ಜೀವವನ್ನೇ ಮುಡಿಪಾಗಿಸಿ ಮಹಾ ಸೇನಾನಿ ಸಂಗೊಳ್ಳಿ ರಾಯಣ್ಣ. ಅವರ ಬದುಕು, ದೇಶ ಭಕ್ತಿ ಇಂದಿಯುವ ಜನರಿಗೆ ಪ್ರೇರಣಾದಾಯಕವಾಗಿದೆ. ರಾಯಣ್ಣನ ವಿಚಾರಧಾರೆಗಳನ್ನು ಜನ ಸಾಮಾನ್ಯರಿಗೆ ತಲುಪಿಸಬೇಕಿದೆ. ಈ ನಿಟ್ಟಿನಲ್ಲಿ ಸಂಗೋಳ್ಳಿ ರಾಯಣ್ಣನ ವೃತ್ತವನ್ನು ರಚಿಸಿ, ಮೂರ್ತಿ ಸ್ಥಾಪನೆಗೆ ಅನುಮತಿ ನೀಡಬೇಕು. ಅದರೊಂದಿಗೆ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಂಗೊಳ್ಳ ರಾಯಣ್ಣನ ಭಾವಚಿತ್ರವನ್ನು ಕಡ್ಡಾಯವಾಗಿ ಅಳವಡಿಸುವಂತೆ ಆದೇಶ ಹೊರಡಿಸಬೇಕು ಎಂದು ಮನವಿ ಮಾಡಿದರು.
ಸಂಘಟನೆಯ ತಾಲೂಕು ಅಧ್ಯಕ್ಷರು ಜಂಬಣ್ಣ ಮೇಟಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಸ್ಕಿ, ಸಂಘಟನಾ ಕಾರ್ಯದರ್ಶಿ ಪ್ರವೀಣ್ ಕುಮಾರ್, ಗೌಡ್ರು ಹನುಮಂತ, ಬಿಸಟ್ಟಿ ತಾಯಪ್ಪ, ಬೆಟ್ಟಪ್ಪ ಮತ್ತು ರಾಜಾಪುರ ಘಟಕದ ಅಧ್ಯಕ್ಷ ಯರಿಸ್ವಾಮಿ, ಪ್ರಮುಖರಾದ ನೂಲಿ ರಾಮಚಂದ್ರಿ, ಮಂಜುನಾಥ್, ಲಕ್ಷ್ಮಣ ಇದ್ದರು.