ಬಾಂಗ್ಲಾ ಹಿಂದುಗಳ ರಕ್ಷಣೆಗೆ ಆಗ್ರಹ; ನಗರದ ವಿವಿಧೆಡೆ ಹಿಂದು ಸಂಟನೆಗಳಿಂದ ಮೌನ ಪ್ರತಿಭಟನೆ

Protest
Published on

ಬೆಂಗಳೂರು: ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ವಿವಿಧ ಹಿಂದು ಸಂಟನೆ ಕಾರ್ಯಕರ್ತರು ಹಾಗೂ ನಾಗರಿಕರು ಶನಿವಾರ ನಗರದ ವಿವಿಧ ಸ್ಥಳಗಳಲ್ಲಿ ಮೌನ ಪ್ರತಿಭಟನೆ ನಡೆಸಿದರು.

ಎಚ್ಚರಿಕೆ ನಡುವೆಯೂ, ಮೈಸೂರು ಬ್ಯಾಂಕ್​ ಸರ್ಕಲ್​ನಲ್ಲಿ ಹೋರಾಟ ಮುಂದುವರಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಮೈಸೂರು ಬ್ಯಾಂಕ್​ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಸ್ವಾತಂತ್ರ್ಯ ಉದ್ಯಾನವನಕ್ಕೆ ತೆರಳಿ ಪ್ರತಿಭಟಿಸಿ ಎಂದು ಪೊಲೀಸರು ಸೂಚಿಸಿದರು. ಮನವಿಗೆ ಸ್ಪಂದಿಸದ ಹೋರಾಟ ಮುಂದುವರಿಸಿದ್ದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಮಲ್ಲೇಶ್ವರ, ಶೇಷಾದ್ರಿಪುರ, ವಿದ್ಯಾರಣ್ಯಪುರ, ಬಿ.ಇ.ಎಲ್​.ವೃತ್ತ, ಬ್ಯಾಟರಾಯನಪುರ, ಸುಬ್ರಹ್ಮಣ್ಯನಗರ, ಬಸವನಗುಡಿ, ರಾಮಮೂರ್ತಿನಗರ, ಜೆ.ಪಿ.ನಗರ, ಕೆ.ಆರ್​.ಪುರ, ಪೀಣ್ಯ ಸೇರಿ ಹಲವು ಕಡೆಗಳಲ್ಲಿ ಹಿಂದು ಕಾರ್ಯಕರ್ತರು ಬಾಂಗ್ಲಾದೇಶದಲ್ಲಿ ಆಗುತ್ತಿರುವ ಅನ್ಯಾಯ ಖಂಡಿಸಿ ಪ್ರತಿಭಟಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net