ಬಂಟ್ವಾಳ: ರೈತರ ಸಾಲ ಮನ್ನಾ ಬಾಕಿ ಮೊತ್ತ ಬಿಡುಗಡೆ ಮಾಡುವಂತೆ ಸಿದ್ದಕಟ್ಟೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಸಹಕಾರ ಸಚಿವರಿಗೆ ಪತ್ರ ಬರೆದಿದ್ದಾರೆ. ಸರ್ಕಾರ 2018-19ನೇ ಸಾಲಿನಲ್ಲಿ ರೈತರು ಪಡೆದಿರುವ ಬೆಳೆ ಸಾಲಗಳ ಪೈಕಿ ಒಂದು ಲಕ್ಷವನ್ನು ಮನ್ನಾ ಮಾಡಿ ಆದೇಶ ಹೊರಡಿಸಿತ್ತು .ಈ ಆದೇಶದ ನಿಯಮಾವಳಿಯಂತೆ ಸಹಕಾರ ಸಂಘಗಳಲ್ಲಿ ಶೂನ್ಯ ಬಡ್ಡಿದರದಲ್ಲಿ ಬೆಳೆಸಾಲ ಪಡೆದಿರುವ ರೈತರ ಅರ್ಜಿಗಳನ್ನು ಪರಿಶೀಲಿಸಿ ಸಾಲ ಮನ್ನಾ ಯೋಜನೆಗೆ ಅರ್ಹರಾದ ಪೈಕಿ ಬಹುತೇಕ ರೈತರಿಗೆ ಸಾಲಮನ್ನಾ ಹಣವನ್ನು ಸರ್ಕಾರ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಿರುತ್ತದೆ. ಈ ರೀತಿಯಲ್ಲಿ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳಲ್ಲಿ ಸಾಲ ಮನ್ನಾ ಯೋಜನೆಗೆ ಅರ್ಹವಾದ ಹಲವಾರು ರೈತರಿಗೆ ಸಾಲ ಮನ್ನಾ ಹಣ ಬಿಡುಗಡೆಯಾಗಿಲ್ಲ ಎಂದು ತಿಳಿಸಿದ್ದಾರೆ.