ಹಕ್ಕು ಪತ್ರ, ಮೂಲ ಸೌಕರ್ಯಕ್ಕೆ ಆಗ್ರಹ

06M.D.R.3
ಹಕ್ಕು ಪತ್ರ ಹಾಗೂ ಮೂಲ ಸೌಕರ್ಯ ಕಲ್ಪಿಸುವಂತೆ ಮದ್ದೂರು ತಾಲೂಕಿನ ಚಾಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಂತಿ ಬಡಾವಣೆಯಯ ನಿವಾಸಿಗಳು ಶಾಸಕ ಕೆ.ಎಂ.ಉದಯ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
Published on

ಮದ್ದೂರು: ಹಕ್ಕು ಪತ್ರ ಹಾಗೂ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಚಾಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಂತಿ ಬಡಾವಣೆಯ ನಿವಾಸಿಗಳು ಶಾಸಕ ಕೆ.ಎಂ.ಉದಯ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.

ಚಾಮನಹಳ್ಳಿ ಗ್ರಾಮದಲ್ಲಿ ಸೋಮವಾರ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ್ದ ವೇಳೆ ಶಾಸಕ ಉದಯ್ ಅವರಿಗೆ ಮನವಿ ಸಲ್ಲಿಸಲಾಯಿತು.

ಗ್ರಾಮದ ಮುಖಂಡ ರಾಜೇಶ್ ಮಾತನಾಡಿ, 50ಕ್ಕೂ ಹೆಚ್ಚು ವರ್ಷಗಳಿಂದ ಜಯಂತಿ ಬಡಾವಣೆಯ ನಿವಾಸಿಗಳಿಗೆ ಹಕ್ಕುಪತ್ರ ಹಾಗೂ ಮೂಲ ಸೌಕರ್ಯವನ್ನು ಜಿಲ್ಲಾ ಮತ್ತು ತಾಲೂಕು ಆಡಳಿತ ನೀಡಿದ ಪರಿಣಾಮ ಸಂಕಷ್ಟದಲ್ಲಿ ಜೀವನ ನಡೆಸಬೇಕಾಗಿದೆ ಎಂದು ಅಳಲು ತೋಡಿಕೊಂಡರು.

ಗ್ರಾಮದ ಸರ್ಕಾರಿ ಜಾಗದಲ್ಲಿ 100ಕ್ಕೂ ಹೆಚ್ಚು ಮನೆಗಳನ್ನು ಸರ್ಕಾರ ನಿರ್ಮಿಸಿಕೊಟ್ಟಿದೆ. ಆದರೆ ಯಾವುದೇ ಸೌಕರ್ಯ ನೀಡಿಲ್ಲ. ಆಗ ನಿರ್ಮಿಸಿರುವ ಮನೆಗಳು ಸಹ ಶಿಥಿಲಗೊಂಡು ವಾಸಕ್ಕೂ ಸಹ ಯೋಗ್ಯವಾಗಿಲ್ಲ. ಹೀಗಾಗಿ ಹಕ್ಕು ಪತ್ರ ನೀಡಿದರೆ ಗ್ರಾಮ ಪಂಚಾಯಿತಿಯಿಂದ ವಸತಿ ಯೋಜನೆಯಡಿ ಮನೆಗಳ ನಿರ್ಮಾಣಕ್ಕೆ ಅನುಕೂಲವಾಗುತ್ತದೆ ಎಂದು ಮನವಿ ಮಾಡಿದರು.

ನಿವಾಸಿಗಳಿಂದ ಮನವಿ ಮತ್ತು ಸಮಸ್ಯೆಗಳನ್ನು ಆಲಿಸಿ ಮಾತನಾಡಿದ ಶಾಸಕ ಕೆ.ಎಂ.ಉದಯ್, ಈ ವಿಚಾರವಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಶೀಘ್ರದಲ್ಲೇ ನಿಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net