ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆಗೆ ಹಕ್ಕೊತ್ತಾಯ

18 Dwd 1
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಸ್ಥಾಪನೆ ಕುರಿತು ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆಯ ಪ್ರತಿನಿಽಗಳು ನಗರದಲ್ಲಿ ಬುಧವಾರ ಸಭೆ ನಡೆಸಿ ಜನಪ್ರತಿನಿಽಗಳ ಮೇಲೆ ಒತ್ತಡ ಹೇರಲು ನಿರ್ಣಯಿಸಿದರು.
ಇಲ್ಲಿನ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ವೇದಿಕೆಯ ಅಧ್ಯಕ್ಷ ವೆಂಕಟೇಶ ಮಾಚಕನೂರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಕಲ್ಬಬುರಗಿಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಬೀದರ್ ಮತ್ತು ರಾಯಚೂರು ನಗರಗಳಿಗೆ ಮಹಾನಗರ ಪಾಲಿಕೆ ರಚನೆ ಕುರಿತು ನಿರ್ಣಯ ಆಗಿದೆ. ಆದರೆ, 2 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಮಹಾನಗರ ಪಾಲಿಕೆ ಸ್ಥಾಪನೆ ಬಗ್ಗೆ ನಿರ್ಲಕ್ಷ÷್ಯ ತೋರಲಾಗುತ್ತಿದೆ. ಇದನ್ನು ಖಂಡಿಸಿ ಜಿಲ್ಲೆಯ ಜನಪ್ರತಿನಿಽಗಳು ಮತ್ತು ಮಂತ್ರಿಗಳನ್ನು ಭೇಟಿಯÁಗಿ ಆಗ್ರಹಿಸಲು ತೀಮÁðನಿಸಲಾಯಿತು. ಈ ಸಂಬAಧ ಸೆ. 19ರಂದು ಮಧ್ಯಾಹ್ನ 2 ಗಂಟೆಗೆ ಮಹಾನಗರ ಪಾಲಿಕೆ ಬಳಿ ಸೇರಿ ಒಗ್ಗಟ್ಟು ಪ್ರದರ್ಶನಕ್ಕೆ ನಿರ್ಧರಿಸಲಾಯಿತು. ಬಳಿಕ ಕಿತ್ತೂರಿಗೆ ತೆರಳಿ ಶಾಸಕ ವಿನಯ ಕುಲಕರ್ಣಿ ಅವರನ್ನು ಭೇಟಿ ಮಾಡಲು ತೀಮÁðನಿಸಲಾಯಿತು. ಪ್ರತ್ಯೇಕ ಪಾಲಿಕೆ ರಚನೆ ಕುರಿತು ಸರ್ಕಾರ ಶೀಘ್ರ ಕ್ರಮ ಕೈಗೊಳ್ಳದಿದ್ದರೆ ಹೋರಾಟ ತೀವ್ರಗೊಳಿಸಲು ಎಲ್ಲರೂ ಒಪ್ಪಿಗೆ ಸೂಚಿಸಿದರು.
ದಾನಪ್ಪ ಕಬ್ಬೇರ, ರಾಜು ಕಮತಿ, ವಸಂತ ಅರ್ಕಾಚಾರ, ರವಿ ಮಾಳಿಗೇರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net