ಜಾಲಿ ಪಪಂ ಅಧ್ಯಕ್ಷೆ ವಜಾಕ್ಕೆ ಆಗ್ರಹ

BKL MANAVI
Published on

ಭಟ್ಕಳ: ರಾಜ್ಯೋತ್ಸವ ಆಚರಣೆ ವೇಳೆ ನಾಡದೇವಿಗೆ ಅಪಮಾನ ಮಾಡಿರುವ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಖಾಜಿಯಾ ಅಪ್ಸ್ ಹುಜೇಫಾ ತಕ್ಷಣ ರಾಜೀನಾಮೆ ನೀಡಿ ಕನ್ನಡಿಗರ ಕ್ಷಮೆ ಯಾಚಿಸಬೇಕು ಎಂದು ಶ್ರೀಭುವನೇಶ್ವರಿ ಕನ್ನಡ ಸಂಘ ಆಗ್ರಹಿಸಿದೆ.

ಈ ಕುರಿತು ಸೋಮವಾರ ಉಪವಿಭಾಗಾಧಿಕಾರಿ ಮೂಲಕ ಜಿಲ್ಲಾಧಿಕಾರಿ, ಮುಖ್ಯಮಂತ್ರಿ, ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗಿದ್ದು ಜಾಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ನಾಡ ದೇವಿ ಶ್ರೀ ಭುವನೇಶ್ವರಿ ದೇವಿಗೆ ಪುಷ್ಪ ನಮನ ಸಲ್ಲಿಸಲು ನಿರಾಕರಿಸಿ ಸಮಸ್ತ ಕನ್ನಡಿಗರ ಸಮ್ಮುಖದಲ್ಲಿ ಬಹಿರಂಗವಾಗಿ ಆಗೌರವ ತೋರಿಸಿದ್ದಾರೆ. ಅವರನ್ನು ನಾಡದ್ರೋಹಿ ಎಂದು ಪರಿಗಣಿಸಿ ಅಧ್ಯಕ್ಷೆ ಸ್ಥಾನದಿಂದ ವಜಾ ಮಾಡಬೇಕೆಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸಂಘದ ಅಧ್ಯಕ್ಷ ಅಣ್ಣಪ್ಪ ಎಸ್. ನಾಯ್ಕ, ಕೃಷ್ಣಾ ನಾಯ್ಕ ಆಸರಕೇರಿ, ಉಪಾಧ್ಯಕ್ಷ ಶ್ರೀಧರ ನಾಯ್ಕ ಪೈಕಿಮನೆ, ಪ್ರಧಾನ ಕಾರ್ಯದರ್ಶಿ ಈಶ್ವರ ನಾಯ್ಕ, ಗೌರವಾಧ್ಯಕ್ಷ ರಮೇಶ ನಾಯ್ಕ, ಸದಸ್ಯರಾದ ಶ್ರೀಧರ ನಾಯ್ಕ ಕೊಲ್ಲೆಮನೆ, ಪ್ರಕಾಶ ನಾಯ್ಕ, ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ವೆಂಕಟೇಶ ನಾಯ್ಕ, ಉಪಾಧ್ಯಕ್ಷ ಶ್ರೀನಿವಾಸ ನಾಯ್ಕ ಹನುಮಾನನಗರ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net