

ರಾಯಚೂರು ಎಸ್‌ಸಿಪಿ,ಸಿಎಸ್‌ಪಿ ಅನುದಾನ ದುರ್ಬಳಕೆಗೆ ಕಾರಣರಾದ ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಬುಧವಾರ ನಗರದ ಡಾ.ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
೨೦೨೪ರ ಆ.೧ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಂತೆ ಮತ್ತು ಪರಿಶಿಷ್ಟ ಜಾತಿಗಳ ಒಳಮೀಸಲಾತಿ, ಮಾದಿಗ ಸಂಘಟನೆಗಳ ನಿರಂತರ ಒತ್ತಡದಿಂದ, ೪ ತಿಂಗಳ ತಡವಾಗಿ ವಲ್ಲದ ಮನಸ್ಸಿ ಅನಿವಾರ್ಯವಾಗಿ ೨೦೨೪ರ ನ.೧೨ರಂದು ನ್ಯಾ.ನಾಗಮೋಹನದಾಸ್ ಏಕಸದಸ್ಯ ಪೀಠ ರಚನೆ ಮಾಡಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿಗೆ ಸಂಬAಽಸಿ ವಿಚಾರಣೆ ಮಾಡಿ ಶಿ-Áರಸ್ಸು ನೀಡಲು ತಮ್ಮ ಸರ್ಕಾರ ಆದೇಶ ನೀಡಿತು ಆದರೆ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಮಾಡದೇ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಮುಂದಾಗಿರುವುದು ಖಂಡನೀಯ ಎಂದರು.
೨೦೨೪ರ ನ.೧೩ರಂದು ಸಮಾಜ ಕಲ್ಯಾಣ ಇಲಾಖೆಯ ಆದೇಶದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿ.ಪಿ.ಎ.ಆರ್) ಕರ್ನಾಟಕ ಸರ್ಕಾರ ಎಲ್ಲಾ ಇಲಾಖೆಗಳಿಗೆ ರವಾನಿಸುತ್ತಾ, ರಾಜ್ಯದ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಽಸೂಚನೆಗಳನ್ನು ಮುಂದಿನ ಆದೇಶದವರೆಗೂ ಹೊರಡಿಸಬಾರದೆಂದು ಸೂಚಿಸಿದೆ. ಆದರೆ ರಾಜ್ಯ ಸರ್ಕಾರದ ವಿವಿದ ಇಲಾಖೆಗಳು, ನಿಗಮಗಳು, ವಿಶ್ವವಿದ್ಯಾಲಯಗಳು, ಸಹಕಾರಿ ಸಂಘಗಳಲ್ಲಿ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಭತಿ ಮಾಡದೇ ಇದ್ದರೆ ಇಲಾಖೆಯ ಮುಖ್ಯಸ್ಥರ ಹೆಸರನ್ನು ನ್ಯಾಯಾಂಗ ನಿಂಧನಾ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ಗೆ ನಿಡಲಾಗುವುದೆಮದು ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹಾದೇವಪ್ಪ ಅವರು ತಿಳಿಸಿರುವುದು ಸರಿಯಲ್ಲ ಎಂದರು.
ಕೂಡಲೇ ಪರಿಶಿಷ್ಟ ಜಾತಿಗಳ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗೆ, ನ್ಯಾ.ನಾಗಮೋಹನ್‌ದಾಸ್ ಆಯೋಗಕ್ಕೆ ಅಸಹಕಾರ
ನೀಡಿದ ಅಽಕಾರಿಗಳೊಂದಿಗೆ ಮತ್ತು ಪರಿಶಿಷ್ಟ ಜಾತಿ,ಪಂಗಡ ಉಪಯೋಜನೆ ಹಣ ದುರ್ಬಳಕೆ ಕೃತ್ಯದಲ್ಲಿ ಶಾಮೀಲಾಗಿರುವ ಎಚ್.ಸಿ.ಮಹಾದೇವಪ್ಪ ನವರನ್ನು ಕೂಡಲೇ ಸಚಿವ ಸಂಪುಟದಿAದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘದ ರಾಜ್ಯ ಪ್ರಧಾನ ಸಂಚಾಲಕ ಎಸ್.ಮಾರೆಪ್ಪ, ರಾಜ್ಯ ಸಂಚಾಲಕ ಹೇಮರಾಜ್
ಅಸ್ಕಿಹಾಳ, ಮಾದಿಗ ದಂಡೋರ ಸಂಘದ ಜಿಲ್ಲಾಧ್ಯಕ್ಷ ನರಸಿಂಹಲು ಮರ್ಚಟಹಾಳ, ಸಮಾಜ ಪರಿವರ್ತನಾ ಸಂಘದ
ಶ್ರೀನಿವಾಸ ಕೊಪ್ಪರ, ಕದಸಂಸ ಮುಖಂಡ ಎಂ.ಈರಣ್ಣ, ಆರ್‌ಎಸ್‌ಪಿಎಸ್ ಮುಖಂಡ ಶರಣು, ಪ್ರಮುಖರಾದ
ತಾಯಪ್ಪ ಗಧಾರ, ನರಸಿಂಹಲು, ಲಕ್ಷ÷್ಮಣ, ಉರುಕುಂದಪ್ಪ, ಎನ್.ಕೆ.ಕೃಷ್ಣ, ಅನ್ವರ್ ಸೇರಿದಂತೆ ಅನೇಕರು ಇದ್ದರು.