ಅಮಾಯಕರ ಬಿಡುಗಡೆಗೆ ಆಗ್ರಹ

26 vikram 13
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ತಡಕೋಡ ಗ್ರಾಮದ ಪ್ರಕರಣದಲ್ಲಿ ಬಂಧಿಸಿರುವ ಅಮಾಯಕ ಹಿಂದು ಯುವಕರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಬಿಜೆಪಿ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಶುಕ್ರವಾರ ಮನವಿ ಸಲ್ಲಿಸಲಾಗಿದೆ.
ರಾಮ ಮಂದಿರದ ಮೇಲೆ ಹಸಿರು ಬಾವುಟ ಅಂಟಿಸಿದಂತೆ ಎಡಿಟ್ ಮಾಡಿರುವುದು ಹಾಗೂ ಈದ್ಗಾ ಗುಂಬಜ ಹಾನಿ ಪ್ರಕರಣ ನಡೆದಿರುವುದು ಖಂಡನೀಯ. ಆದರೆ ಈ ಘಟನೆಯಲ್ಲಿ ಪೊಲೀಸರು ಅಮಾಯಕ ಹಿಂದುಗಳನ್ನು ಬಂಧನ ಮಾಡಿರುವುದು ಖಂಡನೀಯ. ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆಗೆ ಧಕ್ಕೆ ತರುವ ಹುನ್ನಾರದಿಂದ ಕಿಡಿಗೇಡಿಗಳು ಇಂತಹ ಕೃತ್ಯ ಮಾಡಿದ್ದಾರೆ. ಹೀಗಾಗಿ ಪೊಲೀಸರು ಸತ್ಯಾಸತ್ಯತೆ ಅರಿತು ತಪ್ಪಿತಸ್ಥರನ್ನು ಬಂಧಿಸಬೇಕು.
ಫೋಟೊ ಎಡಿಟ್ ಮಾಡಿದವನ ಮನೆಗೆ ನುಗ್ಗಿ ದಾಂಧಲೆ ಮಾಡಿದವರು ಒಂದು ಪಕ್ಷಕ್ಕೆ ಸೀಮಿತವಾಗಿಲ್ಲ. ಆದರೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸುತ್ತಿರುವುದು ಮೇಲ್ನೋಟಕ್ಕೆ ಕಾಣುತ್ತಿದೆ. ಹೀಗಾಗಿ ಕೂಡಲೇ ಅಮಾಯಕರನ್ನು ಬಿಡುಗೊಳಿಸಿ, ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದ್ದಾರೆ.
ಮಾಜಿ ಶಾಸಕರಾದ ಸೀಮಾ ಮಸೂತಿ, ಅಮೃತ ದೇಸಾಯಿ, ಬಸವರಾಜ ಕುಂದಗೋಳಮಠ, ಜಯತೀರ್ಥ ಕಟ್ಟಿ, ಕಾರ್ಯಕರ್ತರು, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net