ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

HUN-OCT-9-2(PDO STRIKE)
Published on

ಹುಣಸೂರು : ವಿವಿಧ ಬೇಡಿಕೆಗಳ ಈಡೇರಿಕಗೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ ಅಧಿಕಾರಿಗಳು ರಾಜ್ಯಾದ್ಯಂತ ಏಕಕಾಲದಲ್ಲಿ ಧರಣಿ ಹಮ್ಮಿಕೊಂಡಿದ್ದು, ಹುಣಸೂರಿನಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.


ನಗರದ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆದ ಪ್ರತಿಭಟನೆಯ ವೇಳೆ ಮಾತನಾಡಿದ ಪಿಡಿಒ ರಾಮಣ್ಣ, ಗ್ರಾ.ಪಂ.ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಆಗುತ್ತಿರುವ ತಾರತಮ್ಯ, ಅನ್ಯಾಯಗಳ ವಿರುದ್ಧ ಈಗಾಗಲೇ ಅ.4ರಂದು ಗ್ರಾ.ಪಂ.ಜನಪ್ರತಿನಿಧಿಗಳೊಂದಿಗೆ ಬೆಂಗಳೂರಿನಲ್ಲಿ ಒಂದು ದಿನದ ಪ್ರತಿಭಟನೆ ನಡೆಸಿದ್ದೇವೆ. ಆದರೆ ಪ್ರತಿಭಟನೆ ನಂತರವೂ ಸರ್ಕಾರವಾಗಲೀ, ಸಂಬಂಧಪಟ್ಟ ಸಚಿವರಾಗಲೀ ನಮ್ಮನ್ನು ಕಡೆಗಣಿಸಿರುವುದರಿಂದ ಇದೀಗ ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ಮುಂದುವೆರೆಸಲಾಗಿದೆ.

ಮೈಸೂರು ನಗರದಲ್ಲಿ ದಸರಾ ಸಂಭ್ರಮ ಮನೆಮಾಡಿರುವುದರಿಂದ ತಾಲೂಕು ಮಟ್ಟದಲ್ಲೇ ಪ್ರತಿಭಟನೆ ನಡೆಸಿದ್ದು, ನಮ್ಮ ಹೋರಾಟ ಅ.10ವರೆಗೂ ಮುಂದುವರೆಯಲಿದೆ ಎಂದರು.


ತಾ.ಪಂ.ಇಒ ಕೆ.ಹೊಂಗಯ್ಯರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಪಿಡಿಒ ಸಂಘದ ಜಿಲ್ಲಾಧ್ಯಕ್ಷ ರುಕ್ಮಂದ. ಪ್ರಧಾನ ಕಾರ್ಯದರ್ಶಿ ಮಹದೇವ್, ತಾಲೂಕು ಕಾರ್ಯದರ್ಶಿ ಶ್ರೀಶೈಲ, ಜಿಲ್ಲಾ ಖಜಾಂಚಿ ಪ್ರಕಾಶ, ಗ್ರಾ.ಪಂ.ಸದಸ್ಯ ಅಗ್ರಹಾರ ರಾಮೇಗೌಡ ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ನೌಕರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net