ಬೇಡಿಕೆಗೆ ಸ್ಪಂದಿಸದ ಸರ್ಕಾರ

23LNG02
Published on

ಲಿಂಗಸುಗೂರು: ರಾಜ್ಯ ಸರ್ಕಾರ ಪಿಂಜಾರ್ (ನದಾಫ್) ಅಭಿವೃದ್ಧಿ ನಿಗಮಕ್ಕೆ ಅನುದಾನ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪಿಂಜಾರ್ (ನದಾಫ್) ಸಂಘದ ನೇತೃತ್ವದಲ್ಲಿ ಸಮುದಾಯದ ತಹಸಿಲ್ ಕಚೇರಿ ಶಿರಸ್ತೇದಾರ್ ಅಮರೇಶಗೆ ಸೋಮವಾರ ಮನವಿ ಸಲ್ಲಿಸಿದರು.

ಪಿಂಜಾರ್ (ನದಾಫ್) ಸಮುದಾಯ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಔದ್ಯೋಗಿಕ, ರಾಜಕೀಯವಾಗಿ ಅತ್ಯಂತ ಹಿಂದುಳಿದ ಇಸ್ಲಾಂ ಧರ್ಮದ ಪಂಗಡವಾಗಿದೆ. ಹಿಂದುಳಿದ ವರ್ಗಗಗಳ ಪ್ರವರ್ಗ-1 ರಡಿ ಮೀಸಲಾತಿ ಹೊಂದಿದ್ದು, ಸರ್ಕಾರದ ಯೋಜನೆಗಳಿಂದ ವಂಚಿತಗೊಂಡಿದೆ ಎಂದು ತಿಳಿಸಿದರು.

2023 ರಲ್ಲಿ ಅಂದಿನ ಸರ್ಕಾರ ಪಿಂಜಾರ್ (ನದಾಫ್) ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ ಹೊರಡಿಸಿತ್ತು. ಆದರೆ ಪ್ರಸ್ತುತ ಸರ್ಕಾರಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ ಮಾಡಿದರೂ ಸರಿಯಾದ ಸ್ಪಂದನೆ ದೊರೆಯುತ್ತಿಲ್ಲ. ಸಿಎಂ ಸಿದ್ಧರಾಮಯ್ಯ ಸಮುದಾಯದ ಬೇಡಿಕೆ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪ್ರಮುಖರಾದ ಶಾಮೀದಲಿ, ಮಹ್ಮದ್ ಖಾಜಾಹುಸೇನ್, ಅಮೀನುದ್ದೀನ್, ಸೈಫುಲ್ಲಾಸಾಬ, ಬಂದೇನವಾಜ್, ಖಾಜಾಹುಸೇನ್, ಎಂ.ಡಿ.ಫಾರೂಕ್, ಇಮಾಮುದ್ದೀನ್, ಅನ್ವರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net