

ಮಂಡ್ಯ: ತಾಲೂಕಿನ ಕೊತ್ತತ್ತಿ ಗ್ರಾಮದಲ್ಲಿ ಶಾಲೆ ಸಮೀಪದಲ್ಲೆ ಬಾರ್ ಆ್ಯಂಡ್ ರೆಸ್ಟೋರೆಂಟ್ ತೆರೆಯಲು ಪರವಾನಗಿ ನೀಡಬಾರದು ಎಂದು ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾ ಅಬಕಾರಿ ಅಧಿಕಾರಿ ಹಾಗೂ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.
2024ರ ಏ.2ರಂದು ಮಿನಿ ಪಾರ್ಟಿ ಹಾಲ್ ಮಾಡಲು ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದು, ನಂತರ ಸಿ.ಎಲ್ 7 (ಬಾರ್ ಆ್ಯಂಡ್ ರೆಸ್ಟೋರೆಂಟ್) ನಡೆಸಲು ಮರು ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ನಾವು ನ್ಯಾಯಾಲಯದ ಮೆಟ್ಟಿಲೇರಿದ್ದು, ಪ್ರಕರಣ ವಿಚಾರಣೆ ಹಂತದಲ್ಲಿದೆ. ಬಳಿಕ ಗ್ರಾಪಂ ಕೂಡ ಪರವಾನಗಿ ರದ್ದು ಪಡಿಸಲು ತೀರ್ಮಾನ ತೆಗೆದುಕೊಂಡಿದೆ. ಹಿಂದಿನ ಅಬಕಾರಿ ಉಪ ಆಯುಕ್ತರು ಪರವಾನಗಿ ನೀಡಲು ಸಾಧ್ಯವಿಲ್ಲ ಎಂದು ಹಿಂಬರಹ ನೀಡಿದ್ದಾರೆ. ಆದರೆ, ಹಾಲಿ ಉಪ ಆಯುಕ್ತರು ಲೈಸೆನ್ಸ್ ನೀಡುವ ಮೂಲಕ ಕಾನೂನು ಉಲ್ಲಂಘಿಸಿದ್ದಾರೆ. ಯಾವುದೇ ಕಾರಣಕ್ಕೂ ಉದ್ದೇಶಿಸಿ ಕಟ್ಟಡದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ ತೆರೆಯಲು ಪರವಾನಗಿ ನೀಡಬಾರದು ಎಂದು ಒತ್ತಾಯಿಸಿದರು.
ಗ್ರಾಮಸ್ಥರಾದ ಸಿದ್ದೇಗೌಡ, ಸಂತೋಷ್, ವಕೀಲ ಅನಿಲ್ಕುಮಾರ್, ನಾಗರಾಜ, ಮಹೇಶ್ ಇದ್ದರು.