ಬಾಕಿ ವೇತನ ಪಾವತಿಗೆ ಒತ್ತಾಯ: ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದಿಂದ ಮನವಿ

Demand payment of arrears Mandya
Published on

ಮಂಡ್ಯ: ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ನೌಕರರಿಗೆ ವೇತನ ಪಾವತಿ ಮಾಡದೆ ವಿಳಂಬ ಮಾಡುತ್ತಿರುವ ಗುತ್ತಿಗೆ ಸಂಸ್ಥೆಯನ್ನು ಕಪ್ಪುಪಟ್ಟಿಗೆ ಸೇರಿಸುವುದರ ಜತೆಗೆ ತುರ್ತಾಗಿ ಬಾಕಿ ವೇತನ ಪಾವತಿ ಮಾಡಬೇಕು ಎಂದು ಆಗ್ರಹಿಸಿ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದಿಂದ ಜಿಲ್ಲಾಧಿಕಾರಿ ಡಾ.ಕುಮಾರ ಅವರಿಗೆ ಮನವಿ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಸಂಘದ ಪದಾಧಿಕಾರಿಗಳು, ಆರೋಗ್ಯ ಇಲಾಖೆಗೆ ಹೊರಗುತ್ತಿಗೆ ನೌಕರರನ್ನು ಸರಬರಾಜು ಮಾಡಲು ಟೆಂಡರ್ ಪಡೆದಿರುವ ಮೈಸೂರಿನ ಪನ್ನಗ ಎಂಟರ್ ಪ್ರೈಸಸ್ ಸಂಸ್ಥೆಯು ಐದಾರು ತಿಂಗಳಿಂದ ಹೊರಗುತ್ತಿಗೆ ನೌಕರರಿಗೆ ವೇತನ ಪಾವತಿ ಮಾಡದೆ ವಂಚಿಸುತ್ತಿದೆ. ಈ ಬಗ್ಗೆ ವಿಚಾರಿಸಿದರೆ ಸಬೂಬು ಹೇಳುತ್ತಿದೆ ಎಂದು ದೂರಿದರು.

ವೇತನದ ಮೇಲೆ ಅವಲಂಬಿತವಾಗಿರುವ ನೌಕರರ ಕುಟುಂಬಗಳು ಸಂಕಷ್ಟದ ಸುಳಿಯಲ್ಲಿ ಸಿಲುಕಿಕೊಂಡದೆ. ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ವಿಚಾರಣೆ ನಡೆಸಿ ನೌಕರರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.

ಸಂಘದ ರಾಜ್ಯಾಧ್ಯಕ್ಷ ಅಕ್ಷಯ್ ಡಿ.ಎನ್ ಗೌಡ, ಸದಸ್ಯ ಬಿ.ಸಿದ್ದಪ್ಪ, ಶಿವಕುಮಾರ್, ಮಂಜುಳಾ, ಪ್ರಕಾಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net