

ಹಿರಿಯೂರು: ಶ್ರಮ ಹಾಗೂ ಸಂಸ್ಕೃತಿಯ ಪ್ರತೀಕವಾಗಿರುವ ಕುಂಚಿಟಿಗ ಸಮುದಾಯದ ಹಿತ ಕಾಯುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಭರವಸೆ ನೀಡಿದರು.
ನಗರದ ತಾಲೂಕು ಕಚೇರಿ ಬಳಿ ಕುಂಚಿಟಿಗ ಕ್ಷೇಮಾಭಿವೃದ್ಧಿ ಸಂಘ ಬುಧವಾರ ಹಮ್ಮಿಕೊಂಡಿದ್ದ ಧರಣಿ ನಿರತ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿ,
ಕೇಂದ್ರದ ಒಬಿಸಿ ಪಟ್ಟಿಗೆ ಸೇರ್ಪಡೆ, ಕುಂಚಿಟಿಗ ಅಭಿವೃದ್ಧಿ ನಿಗಮ ಸ್ಥಾಪನೆ ಇತರ ಬೇಡಿಕೆಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತರುವ ಉದ್ದೇಶದಿಂದ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.
ಮುಖಂಡ ಕಸವಹಳ್ಳಿ ರಮೇಶ್ ಮಾತನಾಡಿ, ಕುಂಚಿಟಿಗರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸೌಲಭ್ಯ ಪಡೆಯಲು ಕೇಂದ್ರದ ಒಬಿಸಿ ಮೀಸಲಾತಿ
ಅನಿವಾರ್ಯ, ಕುಲಶಾಸ್ತ್ರೀಯ ಅಧ್ಯಯನ ವರದಿ ಪ್ರಕಾರ ಒಬಿಸಿ ಪಟ್ಟಿಗೆ ಸೇರಿಸಲು ಕೇಂದ್ರಕ್ಕೆ ತಕ್ಷಣ ಶಿಫಾರಸು ಮಾಡಬೇಕು ಎಂದು ಮನವಿ ಮಾಡಿದರು.
ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಧರಣಿ ನಿರತ ಸ್ಥಳಕ್ಕೆ ಭೇಟಿ ನೀಡಿ, ಹೋರಾಟಕ್ಕೆ ಬೆಂಬಲಿಸಿದರು.
ಕುಬೇರಪ್ಪ, ರಂಗನಾಥ್, ವಿಠ್ಠಲ್ ಪಾಂಡುರಂಗ, ಈರಲಿಂಗೇಗೌಡ, ಬಂಡೀ ಗೌಡ, ಈಶ್ವರ್, ಜಯಪ್ರಕಾಶ್, ಧರ್ಮಪುರ ಈರಣ್ಣ, ಶಶಿಕಲಾ, ದ್ಯಾಮಣ್ಣ, ನಾಗರಾಜು, ಹನುಮಂತರಾಯ, ನರೇಂದ್ರ, ಗ್ರಾಪಂ ಅಧ್ಯಕ್ಷೆ ಹೇಮಲತಾ, ಜೋಗೇಶ್, ರಂಗಸ್ವಾಮಿ ಇದ್ದರು.