

ಹುಬ್ಬಳ್ಳಿ: ಕಳೆದ ಒಂದೂವರೆ ತಿಂಗಳಲ್ಲಿ ಹುಬ್ಬಳ್ಳಿ- ಧಾರವಾಡ ವ್ಯಾಪ್ತಿಯಲ್ಲಿ ಐದು ಹಾಗೂ ವಿವಿಧೆಡೆಯು ಸಹ ಲವ್‌ಜಿಹಾದ್ ಶಂಕೆ ಇರುವ ಪ್ರಕರಣಗಳು ದಾಖಲಾಗಿವೆ. ರಾಜ್ಯ ಸರ್ಕಾರ ಈ ಎಲ್ಲ ಪ್ರಕರಣಗಳನ್ನು ಎಸ್‌ಐಟಿಗೆ ವಹಿಸಬೇಕು ಎಂದು ಮಾಜಿ ಸಚಿವ ಸಿ.ಟಿ. ರವಿ ಆಗ್ರಹಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಶುಕ್ರವಾರ ಲವ್‌ಜಿಹಾದ್ ರೂಪದ ಪ್ರಕರಣ ದಾಖಲಾಗಿದೆ. ಸಿದ್ಧಾಪುರ, ತಿಪಟೂರುನಲ್ಲಿಯೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಸಹೋದರರೆಂದು ಹೇಳಿಕೊಳ್ಳುವವರು ಅಪ್ರಾಪ್ತೆಯನ್ನು ಅಪಹರಣ ಮಾಡಿದ್ದಾರೆ ಎಂದು ಆರೋಪಿಸಿದರು.
ಈ ಎಲ್ಲ ಅಪಾಧಿತರು ಒಂದು ಕೋಮಿಗೆ ಸೇರಿದ್ದಾರೆ. ಲವ್‌ಜಿಹಾದ್ ಯೋಜನೆ ಬದ್ಧವಾಗಿದೆ ಮಾಡುತ್ತಿದ್ದು, ಮುಸ್ಲಿಮರು ಹಿಂದುಯುವತಿಯರನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಕಿಡಿಕಾರಿದರು.
ಹಿಂದೆ ಕೇರಳದಲ್ಲಿ ಇಂತಹ ಪ್ರಕರಣ ಹೆಚ್ಚಾದಾಗ ಸರ್ಕಾರ ಎಸ್‌ಐಟಿ ರಚಿಸಿ ತನಿಖೆ ಕೈಗೊಂಡಿದ್ದು, ಅಲ್ಲಿಯ ನ್ಯಾಯಾಲಯವು ಪ್ರಕರಣಗಳ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು ಎಂದು ತಿಳಿಸಿದರು.
ಶಾಸಕ ಮಹೇಶ ಟೆಂಗಿನಕಾಯಿ, ಮೇಯರ್ ವೀಣಾ ಬರದ್ವಾಡ ಸುದ್ದಿಗೋಷ್ಠಿಯಲ್ಲಿದ್ದರು.