

ಕಡಬ: ಸಿರಿಬಾಗಿಲು ಗ್ರಾಮದ ಗುಂಡ್ಯ ತೋಟ ಎಂಬಲ್ಲಿ ಗುರುವಾರ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯವರು ಜಂಟಿ ಸರ್ವೇ ಕಾರ್ಯ ನಡೆಸುವ ಸಂದರ್ಭ ರೈತರಿಗೆ, ಪಂಚಾಯಿತಿ ಅಧ್ಯಕ್ಷರಿಗೆ ಹಾಗೂ ಕ್ಷೇತ್ರದ ಶಾಸಕರ ಗಮನಕ್ಕೆ ತಂದು ಸರ್ವೇ ನಡೆಸಬೇಕು ಎಂದು ಮಲೆನಾಡು ಹಿತರಕ್ಷಣ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಆಗ್ರಹಿಸಿದರು.
ಮಲೆನಾಡು ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಅಧಿಕಾರಿಗಳಿಗೆ ಹಲವಾರು ಪ್ರಶ್ನೆಗಳನ್ನು ಕೇಳಿದ್ದು, ಇಲಾಖಾಧಿಕಾರಿಗಳು ಸಮರ್ಪಕವಾಗಿ ಉತ್ತರಿಸಲು ವಿಫಲರಾಗಿದ್ದಾರೆ. ಮುಂದಿನ ಹಂತಗಳಲ್ಲಿ ನಕಾಶೆ ಮತ್ತು ತತ್ಸಂಬಂಧಿ ಇಲಾಖಾ ವರದಿಗಳನ್ನು ಸಾರ್ವಜನಿಕರ ಮುಂದೆ ಇಟ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಹೇಳಿದ ಬಳಿಕ ಸರ್ವೇ ಕಾರ್ಯ ಮಾಡಲು ಅವಕಾಶ ಮಾಡಿಕೊಡಲಾಯಿತು. ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಪ್ರಮುಖರಾದ ದಾಮೋದರ್ ಗುಂಡ್ಯ, ಪ್ರಕಾಶ್ ಗುಂಡ್ಯ ಮತ್ತಿತರರು ಉಪಸ್ಥಿತರಿದ್ದರು.