ಹೆಚ್ಚಿನ ಡೊನೇಷನ್‌ಗೆ ಕಡಿವಾಣ ಹಾಕಲು ಒತ್ತಾಯ

MOUNESH
MOUNESH
Published on

ರಾಯಚೂರು ಜಿಲ್ಲೆಯಲ್ಲಿ ಖಾಸಗಿ ಶಾಲಾ ಕಾಲೇಜುಗಳಲ್ಲಿ ಹೆಚ್ಚಿನ ಡೊನೇಷನ್ ಹಾಗೂ ಪ್ರವೇಶಾತಿ ಶುಲ್ಕ ಪಡೆದು ಅನಧಿಕೃತ ವಸತಿ ನಿಲಯಗಳನ್ನು ನಿರ್ವಹಣೆ ಮಾಡುತ್ತಿರುವವರ ವಿರುದ್ಧ ಕ್ರಮ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ದಲಿತ ವಿದ್ಯಾರ್ಥಿ ಪರಿಷತ್‌ನ ಜಿಲ್ಲಾ ಸಂಚಾಲಕ ಮೌನೇಶ ಜಾಲವಾಡಗಿ ಒತ್ತಾಯಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಸಾಕಷ್ಟು ಖಾಸಗಿ ಶಾಲಾ ಕಾಲೇಜುಗಳು ಪ್ರವೇಶಾತಿ ಪಡೆಯಲು ಹೆಚ್ಚಿನ ಡೊನೇಷನ್ ಪಡೆಯುತ್ತಿದ್ದಾರೆ, ಶಿಕ್ಷಣವು ವ್ಯಾಪಾರಿಕರಣವಾಗಿ ಇದೊಂದು ದೊಡ್ಡ ದಂಧೆಯನ್ನಾಗಿಸಿಕೊಂಡಿದ್ದಾರೆ ಎಂದು ದೂರಿದರು.

ಜಿಲ್ಲೆಯಲ್ಲಿ ನಾಯಿಕೊಡೆಗಳಂತೆ ನೂರಾರು ಶಿಕ್ಷಣ ಸಂಸ್ಥೆಗಳು ಹುಟ್ಟಿಕೊಂಡಿವೆ, ಶಿಕ್ಷಣ ಇಲಾಖೆಯ ನಿಯಮಗಳನ್ನು ಮೀರಿ ಶಾಲಾ ಕಾಲೇಜುಗಳನ್ನು ನಡೆಸುತ್ತಿದ್ದಾರೆ, ಡೊನೇಷನ್ ಹೆಸರಿನಲ್ಲಿ ಲಕ್ಷಾಂತರ ರೂ. ಹಣ ವಸೂಲಿ ಮಾಡುತ್ತಿದ್ದಾರೆ, ಅನಧಿಕೃತ ಶಾಲಾ ಕಾಲೇಜುಗಳ ನಿಯಂತ್ರಣಕ್ಕೆ ಶಿಕ್ಷಣ ಹಕ್ಕು ಕಾಯ್ದೆಯಡಿ ಡೇರಾ ಸಮಿತಿ, ಡೊನೇಷನ್ ನಿಯಂತ್ರಣ ಸಮಿತಿ ಅಸ್ತಿತ್ವದಲ್ಲಿರಬೇಕು ಆದರೆ ಯಾವುದೇ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ವಹಿಸಿಲ್ಲವೆಂದು ಆಪಾದಿಸಿದರು.


ಡೇರಾ ಸಮಿತಿ ಹೆಸರಿಗಷ್ಟೇ ಎಂಬಂತಾಗಿದೆ. ಜಿಲ್ಲೆಯಲ್ಲಿ ಅನಧಿಕೃತ ಶಾಲಾ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ಅನಧಿಕೃತ ಶಾಲಾ ಕಾಲೇಜುಗಳ ಬಗ್ಗೆ ಮಾಹಿತಿ ಇದ್ದು, ಬಿಡುಗಡೆ ಮಾಡಬೇಕು, ಜಿಲ್ಲಾಧಿಕಾರಿಗಳು ಶಿಕ್ಷಣ ಇಲಾಖೆಯೊಂದಿಗೆ ಸಭೆ ನಡೆಸಿ ಅನಧಿಕೃತ ಶಾಲಾ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷೆ ವಿಜಯರಾಣಿ ಸಿರವಾರ, ಕರಿಯಪ್ಪ, ಚನ್ನ ಬಸವ ಯಾಪಲಪರ್ವಿ, ಪದ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net