

ಮಡಿಕೇರಿ:
ಭಾರತ-ಪಾಕ್ ನಡುವಿನ 1965ರ ಯುದ್ಧದಲ್ಲಿ ಶತ್ರು ರಾಷ್ಟçದ ಯುದ್ಧ ವಿಮಾನವನ್ನು ಸಾಹಸಿಕ ಪ್ರÀಯತ್ನದ ಮೂಲಕ ಹೊಡೆದುರುಳಿಸಿ ಬಲಿದಾನಗೈದ ಕೊಡಗಿನ ಸ್ಕಾ÷್ವಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ 59ನೇ ಪುಣ್ಯಸ್ಮರಣಾ ಕಾರ್ಯಕ್ರಮ ನಗರದ ಖಾಸಗಿ ಬಸ್ ನಿಲ್ದಾಣದ ವೀರಯೋಧನ ವೃತ್ತದಲ್ಲಿ ಪುಷ್ಪನಮನ ಸಲ್ಲಿಸುವ ಮೂಲಕ ಶನಿವಾರ ಹೃದಯಸ್ಪರ್ಶಿಯಾಗಿ ನಡೆಯಿತು.
ಕೊಡವ ಮಕ್ಕಡ ಕೂಟ, ಅಜ್ಜಮಾಡ ಒಕ್ಕ (ಕುಟುಂಬಸ್ಥರು) ಹಾಗೂ ಸ್ವಾ.ಲೀ.ಅಜ್ಜಮಾಡ ದೇವಯ್ಯ ಟ್ರಸ್ಟ್ನ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ವೀರ ಯೋಧನ ಭಾವ ಚಿತ್ರಕ್ಕೆ ಅಜ್ಜಮಾಡ ಕುಟುಂಬಸ್ಥರು, ಮಾಜಿ ಯೋಧರು, ಗಣ್ಯರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಸ್ವಾ.ಲೀ. ಅಜ್ಜಮಾಡ ದೆೆÃವಯ್ಯ ಟ್ರಸ್ಟ್ ಅಧ್ಯಕ್ಷ ಅಜ್ಜಮಾಡ ಕಟ್ಟಿಮಂದಯ್ಯ, ಭಾರತ-ಪಾಕ್ ಯುದ್ಧದ ಸಂದರ್ಭ ಶತ್ರು ರಾಷ್ಟçದ ವಿಮಾನವನ್ನು ಹೊಡೆದುರುಳಿಸುವ ಮೂಲಕ ಕೆಚ್ಚೆದೆಯ ಸಾಹಸ ಮೆರೆದು ಸ್ಕಾ÷್ವ.ಲೀ.ದೇವಯ್ಯ ಹುತಾತ್ಮರಾಗಿದ್ದಾರೆ. ಅವರ ಬಲಿದಾನದ ಈ ದಿನವನ್ನು ‘ರಾಷ್ಟಿçÃಯ ಪುಣ್ಯದಿನ’ವನ್ನಾಗಿ ಘೋಷಿಸುವ ಮೂಲಕ ಸರ್ಕಾರವೇ ಪುಣ್ಯದಿನವನ್ನು ಆಚರಿಸಬೆÉÃಕೆಂದು ಮನವಿ ಮಾಡಿದರು. ಕೊಡಗು ಫೀ.ಮಾ. ಕೆ.ಎಂ.ಕಾರ್ಯಪ್ಪ, ಜ.ತಿಮ್ಮಯ್ಯ ಅವರಂತಹ ಮಹಾನ್ ವೀರ ಸೇನಾನಿಗಳನ್ನು, ಕೆಚ್ಚೆದೆಯ ಯೋಧರನ್ನು ಈ ನಾಡಿಗೆ ನೀಡಿದ ಪುಣ್ಯಭೂಮಿ. ಈ ನೆಲದ ಸುಪುತ್ರರಾಗಿ ದೇಶ ರಕ್ಷಣೆಗಾಗಿ ಬಲಿದಾನಗೈದ ಸ್ಕಾ÷್ವ.ಲೀ.ದೇವಯ್ಯ ಅವರ ಭಾವ ಚಿತ್ರವನ್ನು ಎಲ್ಲಾ ಕೊಡವ ಸಮಾಜಗಳಲ್ಲಿ ಅಳವಡಿಸಬೇಕೆಂದು ಕೋರಿದ ಅವರು, ಸ್ಕಾ÷್ವ.ಲೀ. ದೇವಯ್ಯ ಅವರು ಅಜ್ಜಮಾಡ ಕುಟುಂಬದಲ್ಲಿ ಜನಿಸಿರಬಹುದು. ಆದರೆ, ಅವರು ಇಡೀ ರಾಷ್ಟçಕ್ಕೆ ಸೇರಿದ ವ್ಯಕ್ತಿಯಾಗಿದ್ದಾರೆಂದರು.
ಮಾಜಿ ಸ್ಪೀಕರ್ ಕೆ.ಜಿ. ಬೋಪಯ್ಯ ಮಾತನಾಡಿ, ಭಾರತ-ಪಾಕ್ ಯುದ್ಧದಲ್ಲಿ ಹುತಾತ್ಮರಾದ ಸ್ಕಾ÷್ವ.ಲೀ. ದೇವಯ್ಯ ಅವರು, ರಾಷ್ಟç ರಕ್ಷಣೆಗಾಗಿ ನಡೆಸಿದ ಹೋರಾಟದ ಮೂಲಕ ಎಲ್ಲ ವಿಚಾರಗಳಿಗೂ ಮಿಗಿಲಾಗಿ ‘ದೇಶ ಮೊದಲು’ ಎನ್ನುವುದನ್ನು ತೋರಿಸಿಕೊಡುವ ಮೂಲಕ ಪ್ರತಿಯೊಬ್ಬರಿಗೂ ಮಾರ್ಗದರ್ಶಕರಾಗಿದ್ದಾರೆಂದು ಹೇಳಿದರು.
ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷÀ ಮಂಡುವAಡ ಮುತ್ತಪ್ಪ ಮಾತನಾಡಿ, ರಾಷ್ಟçದ ಹೆಮ್ಮೆಯ ಪುತ್ರ ಸ್ಕಾ÷್ವ.ಲೀ.ದೇವಯ್ಯ ಅವರ ಭಾವಚಿತ್ರವನ್ನು ಮಡಿಕೇರಿ ಕೊಡವ ಸಮಾಜದಲ್ಲಿ ಅಳವಡಿಸಲಾಗುತ್ತದೆಂದರಲ್ಲದೆ ಸ್ಕಾ÷್ವ.ಲೀ. ದೇವಯ್ಯ ಅವರು ತಮ್ಮ ದೇಶ ಪ್ರೇಮ, ಸಾಹಸ, ಕೆಚ್ಚೆದೆಯ ನಿಲುವುಗಳ ಮೂಲಕ ಯುವಪೀಳಿಗೆಗೆ ಮಾರ್ಗದರ್ಶಕರಾಗಿದ್ದಾರೆ ಎಂದರು.
ಮಡಿಕೇರಿ ನಗರಸಭಾ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ಯೋಧರ ನಾಡೆಂದು ಕರೆಯಲ್ಪಡುವ ಕೊಡಗಿನಲ್ಲಿ ಇತ್ತೀಚಿನ ದಿನಗಳಲ್ಲಿ ಸೈನ್ಯಕ್ಕೆ ಭರ್ತಿಯಾಗುತ್ತಿರುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಸ್ಕಾ÷್ವ.ಲೀ.ದೇವಯ್ಯ ಅವರ ಆದರ್ಶಗಳನ್ನು ಯುವ ಪೀಳಿಗೆ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಯಕ್ಕೆ ಭರ್ತಿಯಾಗಲು ಮುಂದೆ ಬರುವಂತೆ ಕರೆ ನೀಡಿದರು.
ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ನ ಜಿಲ್ಲಾ ಆಯುಕ್ತ ಕೆ.ಟಿ. ಬೇಬಿ ಮ್ಯಾಥ್ಯು, ಮಾಜಿ ಯೋಧ ಬಾಳೆಯಡ ಶಂಭು ಮಾತನಾಡಿದರು. ಏರ್ ಮಾರ್ಷಲ್ ಕೆ.ಸಿ. ಕಾರ್ಯಪ್ಪ ಅವರು ಸ್ಕಾ÷್ವ.ಲೀ. ದೇವಯ್ಯ ವೃತ್ತಕ್ಕೆ ಆಗಮಿಸಿ ವೀರ ಯೋಧನಿಗೆ ಗೌರವ ನಮನ ಸಲ್ಲಿಸಿದರು.
ಕೊಡವ ಮಕ್ಕಡ ಕೂಟದ ಬೊಳ್ಳಜಿರ ಅಯ್ಯಪ್ಪ ಅವರು ಕಾರ್ಯಕ್ರಮದ ಬಳಕ ಸ್ಕಾ÷್ವ.ಲೀ.ದೇವಯ್ಯ ಅವರ ಭಾವ ಚಿತ್ರವನ್ನು ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಎಂ.ಪಿ.ಮುತ್ತಪ್ಪ ಅವರಿಗೆ ಕೊಡುಗೆಯಾಗಿ ನೀಡಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಸ್. ಸುಂದರರಾಜ್, ಮಾಜಿ ಯೋಧ ಮಲಚ್ಚೀರ ಅಚ್ಚಯ್ಯ, ಬೊಟ್ಟಂಗಡ ಜಪ್ಪು, ಬಾಳೆಯಡ ಮಂದಪ್ಪ, ಅಜ್ಜಮಾಡ ಕುಟುಂಬಸ್ಥರಾದ ಅಜ್ಜಮಾಡÀ ಬೆಳ್ಯಪ್ಪ, ಕಾರ್ಯಪ್ಪ, ಚಂಗಪ್ಪ, ಬೋಪಯ್ಯ, ಅಯ್ಯಣ್ಣ, ಪುಟ್ಟಿಚಂಡ ಡಾನ್ ದೇವಯ್ಯ, ಕೂಟದ ಪದಾಧಿಕಾರಿ ಪುತ್ತೇರಿರ ಕಾಳಯ್ಯ ಮೊದÀಲಾದವರು ಪಾಲ್ಗೊಂಡು ವೀರ ಯೋಧನಿಗೆ ಗೌರವ ಸಲ್ಲಿಸಿದರು.