ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ 50:50 ಅನುಪಾತದಲ್ಲಿನ ನಿವೇಶನ ಹಂಚಿಕೆ ಹಗರಣದ ತನಿಖೆ ಸಿಬಿಐಗೆ ವಹಿಸಬೇಕು ಎಂದು ಮೈಸೂರು ಹೃದಯವಂತ ಕನ್ನಡಿಗರು ಸಂಘಟನೆ ಸಂಸ್ಥಾಪಕ ಅಧ್ಯಕ್ಷ ಡಿಪಿಕೆ ಪರಮೇಶ್ ಆಗ್ರಹಿಸಿದರು.
ಈ ಹಗರಣ ಮೈಸೂರು ನಗರಕ್ಕೆ ಕಪ್ಪುಚುಕ್ಕೆಯಂತಾಗಿದ್ದು, ಹಗರಣದಲ್ಲಿ ಭಾಗಿ ಆಗಿರುವ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೇಕು. ರಾಜಕಾರಣಿಗಳ ಕೈವಾಡವಿದ್ದರೆ ಅಂತಹವರನ್ನು ಪಕ್ಷದಿಂದ ಉಚ್ಚಾಟಿಸಬೇಕು. ಪ್ರಕರಣವನ್ನು ಸಿಬಿಐಗೆ ವಹಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಆರೋಪ ಮುಕ್ತರಾಗಬೇಕು ಎಂದು ಆಗ್ರಹಿಸಿದರು.
ಸಂಘಟನೆಯ ರಾಜಶೇಖರ್, ಗಿರೀಶ್, ರವಿ, ರಾಜೇಂದ್ರ, ಮಂಜುನಾಥ್, ಯೋಗೇಶ್ ಇತರರು ಇದ್ದರು.