ಮತದಾರರಿಗೆ ಆಮಿಷೆ ಒಡ್ಡಿದ ಆರೋಪ; ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸಲು ಆಗ್ರಹ

siddaramaiah
Published on

ಮೈಸೂರು: ವರುಣ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತದಾರರಿಗೆ ಆಮಿಷೆಗಳನ್ನು ಒಡ್ಡಿ ಆಯ್ಕೆಗೊಂಡಿದ್ದು, ಚುನಾವಣಾ ಆಯೋಗ ಸಿದ್ದರಾಮಯ್ಯ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ನಗರಾಧ್ಯಕ್ಷರಾಗಿರುವ ಶಾಸಕ ಟಿ.ಎಸ್. ಶ್ರೀವತ್ಸ ಆಗ್ರಹಿಸಿದರು.

ಚುನಾವಣೆ ಸಂದರ್ಭ ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್‌ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಸ್ವತಃ ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಬಹಿರಂಗ ಸಮಾರಂಭವೊಂದರಲ್ಲಿ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಆಧಾರದ ಮೇಲೆ ಚುನಾವಣಾ ಆಯೋಗ ಸಿದ್ದರಾಮಯ್ಯ ಅಯ್ಕೆಯನ್ನು ಅಸಿಂಧುಗೊಳಿಸಬೇಕು. ಇಲ್ಲವಾದಲ್ಲಿ ನ್ಯಾಯಾಲಯದ ಮೊರೆ ಹೋಗಲಾಗು ವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಸಿದರು.

ಮತದಾರರಿಗೆ ಆಮಿಷೆ ಒಡ್ಡಿದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ವರುಣ ಕ್ಷೇತ್ರದಲ್ಲಿ ಗೆಲುವು ಸಾಧಿಸಿದರು. ಇದು ಪ್ರಜಾಪ್ರತಿನಿಧಿ ಕಾಯ್ದೆ ಹಾಗೂ ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದೆ. ಸಿದ್ದರಾಮಯ್ಯ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿ ಸಿದರೆ ಇದು ದೇಶಕ್ಕೆ ಮಾದರಿಯಾದ ಪ್ರಕರಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net