ಅಂಗನವಾಡಿ ಕೇಂದ್ರಗಳಲ್ಲಿ ಅಕ್ರಮ ತಡೆಗಟ್ಟಲು ಆಗ್ರಹ, ಕೆಆರ್‌ಎಸ್ ಪಕ್ಷದಿಂದ ಮನವಿ

KRS REQUEST WOMAN AND CHAILD DEPT
ವಿಜಯಪುರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳು ಮನವಿ ಸಲ್ಲಿಸಿದರು. ಶಿವಾನಂದ ಯಡಹಳ್ಳಿ, ಹಮೀದ್ ಇನಾಮದಾರ, ವಿಕ್ರಮ್ ವಾಘಮೋರೆ ಮತ್ತಿತರರಿದ್ದಾರೆ.
Published on

ವಿಜಯಪುರ: ತಾಯಿ ಮತ್ತು ಮಗುವಿನ ಆರೋಗ್ಯದ ದೃಷ್ಠಿಯಿಂದ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಆದರೆ, ಅಂಗನವಾಡಿ ಕಾರ್ಯಕರ್ತೆಯರು ಸಮರ್ಪಕವಾಗಿ ತಲುಪಿಸುತ್ತಿಲ್ಲ. ಹೀಗಾಗಿ ಅಕ್ರಮ ತಡೆಗಟ್ಟಲು ಆಗ್ರಹಿಸಿ ಕೆಆರ್‌ಎಸ್ ಪಕ್ಷದ ಪದಾಧಿಕಾರಿಗಳು ಶುಕ್ರವಾರ ಪ್ರತಿಭಟನೆ ನಡೆಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಮನವಿ ಸಲ್ಲಿಸಿದರು.

ಜಿಲ್ಲೆಯ ಬಹುತೇಕ ಅಂಗನವಾಡಿ ಕೇಂದ್ರಗಳು ಅಂಗನವಾಡಿ ಕಾರ್ಯಕರ್ತೆಯರ ಕುಟುಂಬದ ಆರ್ಥಿಕ ಅಭಿವೃದ್ಧಿಗೆ ನಿರ್ಮಾಣವಾದಂತೆ ಭಾಸವಾಗುತ್ತಿವೆ. ಬಹುತೇಕ ಅಂಗನವಾಡಿ ಕೇಂದ್ರಗಲ್ಲಿ ಮಕ್ಕಳೇ ಇರುವುದಿಲ್ಲ. ಆದರೂ ಆ ದಿನದ ಹಾಜರಾತಿ ಪೂರ್ತಿಯಾಗಿ ತೋರಿಸಿ ಆ ಮಕ್ಕಳಿಗೆ ಬರುವ ಎಲ್ಲ ರೀತಿಯ ಸೌಲಭ್ಯಗಳನ್ನು (ಆಹಾರ ಕಿಟ್) ಹೊರಗಡೆ ಖಾಸಗಿ ವ್ಯಕ್ತಿಗಳಿಗೆ ಮಾರಿಕೊಳ್ಳುತ್ತಿರುವ ಸಂಗತಿ ಜಿಲ್ಲೆಯಾದ್ಯಂತ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಅಂಗನವಾಡಿ ಕೇಂದ್ರಗಳು ಕೇವಲ ಸರ್ಕಾರಕ್ಕೆ ಖೊಟ್ಟಿ ವರದಿ ನೀಡುವ ಕೇಂದ್ರಗಳಾಗಿ ನಿರ್ಮಾಣವಾಗುತ್ತಿರುವುದು ವಿಷಾದನೀಯ ಸಂಗತಿ. ಈ ಕಹಿ ಸತ್ಯವು ತಮಗೂ ಸೇರಿದಂತೆ ಇಲಾಖೆಯ ಬಹುತೇಕ ಸಿಬ್ಬಂದಿಗೆ ತಿಳಿದ ವಿಷಯವೇ ಆದರೂ ಈ ವಿಷಯದ ಬಗ್ಗೆ ತಾವು ಯಾವುದೇ ರೀತಿಯ ಕ್ರಮ ಕೈಗೊಂಡಿರುವುದಿಲ್ಲ. ಆದ್ದರಿಂದಾಗಿ ಸೂಕ್ತ ಕ್ರಮ ಕೈಗೊಳ್ಳದೆ ಹೋದರೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ತಮ್ಮ ಕಚೇರಿಯ ಮುಂದೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ ಎಚ್ಚರಿಕೆ ನೀಡಿದರು.

ಪದಾಧಿಕಾರಿಗಳಾದ ಹಮೀದ್ ಇನಾಮದಾರ, ವಿಕ್ರಮ್ ವಾಘಮೋರೆ, ದುರ್ಗಪ್ಪ ಬೂದಿಹಾಳ, ಕಾಂತುಗೌಡ ಬೆಂಡವಾಡ, ಪ್ರವೀಣ ಕನಸೆ, ರಾಘವೇಂದ್ರ ಛಲವಾದಿ, ಸುರೇಂದ್ರ ಕುನಸಲೇ, ಭೀಮಾಶಂಕರ ಕಾಂಬಳೆ, ಲಕ್ಷ್ಮಣ ಚಡಚಣ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net