ಬಡವರಿಗೆ ನಿವೇಶನ ನೀಡುವಂತೆ ಆಗ್ರಹ

17spt6
ಸೋಮವಾರಪೇಟೆ ನಗರ ಕಾಂಗ್ರೆಸ್ ವತಿಯಿಂದ ನಿವೇಶನ ರಹಿತ ಬಡವರಿಗೆ ಉಚಿತ ನಿವೇಶನ ನೀಡುವಂತೆ ಪಂಚಾಯಿತಿ ಮುಖ್ಯಾಧಿಕಾರಿ ಸತೀಶ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಮಂಜುನಾಥ್, ಶಫಿ, ಜಮೀರ್, ರುಬಿನಾ ಇದ್ದರು.
Published on

ಸೋಮವಾರಪೇಟೆ: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನಿವೇಶನ ರಹಿತ ಬಡವರಿಗೆ ಹಾಗೂ ಪಂಚಾಯಿತಿಯ ಡಿ ದರ್ಜೆ ಹೊರಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಕೂಡಲೇ ಉಚಿತ ನಿವೇಶನ ನೀಡುವಂತೆ ಆಗ್ರಹಿಸಿ ನಗರ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಸೋಮವಾರ ಮುಖ್ಯಾಧಿಕಾರಿ ಸತೀಶ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಪಂಚಾಯಿತಿ ವ್ಯಾಪ್ತಿಯ ಬಾಡಿಗೆ ಮನೆಗಳಲ್ಲಿ ವಾಸ ಮಾಡುತ್ತಿರುವ ಬಡವರು, ಕೂಲಿಕಾರ್ಮಿಕರು ಒಂದು ನಿವೇಶನಕ್ಕಾಗಿ ಕಳೆದ 20 ವರ್ಷಗಳಿಂದ ಅರ್ಜಿ ಸಲ್ಲಿಸಿಕೊಂಡು ಕಾಯುತ್ತಿದ್ದಾರೆ. ಅವರಿಗೆ ಸ್ವಂತ ಮನೆಯ ಅವಶ್ಯಕತೆಯಿದೆ. ಪಂಚಾಯಿತಿ ಆಡಳಿತ ಮಂಡಳಿ ನಿಜವಾದ ಫಲಾನುಭವಿಗಳನ್ನು ಆಯ್ಕೆ ಮಾಡಿ ನಿವೇಶನಗಳನ್ನು ನೀಡಬೇಕೆಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಪಟ್ಟಣ ವ್ಯಾಪ್ತಿಯಲ್ಲಿ ಬೀದಿ ನಾಯಿ ಹಾವಳಿ ಮಿತಿಮೀರಿದೆ. ಶಾಲಾ ಮಕ್ಕಳು, ವೃದ್ಧರು ರಸ್ತೆಯಲ್ಲಿ ನಡೆದಾಡಲು ಭಯಪಡುತ್ತಿದ್ದಾರೆ. ಬಿಡಾಡಿ ದನಗಳ ಹಾವಳಿಯೂ ಹೆಚ್ಚಿದೆ. ಇದರಿಂದ ವಾಹನ ಅಪಘಾತಗಳು ಸಂಭವಿಸುತ್ತಿವೆ. ಇವುಗಳ ನಿಯಂತ್ರಣಕ್ಕೆ ಪಂಚಾಯಿತಿ ಆಡಳಿತ ಕ್ರಮಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಮಹಮ್ಮದ್ ಶಫಿ, ಉಪಾಧ್ಯಕ್ಷ ಜಮೀರ್, ಪದಾಧಿಕಾರಿಗಳಾದ ಜೇಕಬ್ ಸೈಮನ್, ಮೀನಾ ಕುಮಾರಿ, ಎಂ.ಎ.ರುಬಿನಾ, ಸುಹಾಸ್, ಸಂತೋಷ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net