ಮದ್ದೂರು: ತಾಲೂಕಿನ ಕೊಪ್ಪದ ಎನ್‌ಎಸ್‌ಎಲ್ ಸಕ್ಕರೆ ಕಾರ್ಖಾನೆ ಜುಲೈ ಮೊದಲ ವಾರದಲ್ಲಿ ಪ್ರಾರಂಭವಾಗುತ್ತಿದೆ. ಕಾರ್ಖಾನೆಗೆ ಕಬ್ಬು ಸರಬರಾಜು ಮಾಡಬೇಕಾಗಿರುವುದರಿಂದ ಕೆಆರ್‌ಎಸ್ ಅಣೆಕಟ್ಟೆಯಿಂದ ವಿಶ್ವೇಶ್ವರಯ್ಯ ನಾಲೆಗಳಿಗೆ ನೀರು ಹರಿಸಬೇಕು ಎಂದು ಕರ್ನಾಟರ ರಾಜ್ಯ ರೈತ ಸಂಘದ ಹಿರಿಯ ಮುಖಂಡ ಕೀಳಘಟ್ಟ ನಂಜುಂಡಯ್ಯ ಒತ್ತಾಯಿಸಿದರು.
ಕೆಆರ್‌ಎಸ್ ಅಣೆಕಟ್ಟೆಯಿಂದ ವಿಶ್ವೇಶ್ವರಯ್ಯ ನಾಲೆಗಳಿಗೆ ನೀರು ಹರಿಸದ ಪರಿಣಾಮ ಕಬ್ಬು ಸೇರಿದಂತೆ ಇನ್ನಿತರ ಬೆಳೆಗಳು ಒಣಗುತ್ತಿದೆ. ಈಗ ನೀರು ಬಿಡದಿದ್ದರೆ ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲ ಎಂಬಂತಾಗುತ್ತದೆ. ಬರಗಾಲದಿಂದ ನೊಂದಿರುವ ರೈತರಿಗೆ ಗಾಯದ ಮೇಲೆ ಬರೆ ಎಳೆಯುವುದನ್ನು ಬಿಟ್ಟು ಜಿಲ್ಲೆಯ ಚುನಾಯಿತಿ ಪ್ರತಿನಿಧಿಗಳು ನಾಲೆಗಳಿಗೆ ನೀರು ಹರಿಸಲು ಅಗತ್ಯ ಕ್ರಮ ಕೈಗೊಂಡು ರೈತರ ಹಿತ ಕಾಪಾಡಬೇಕು ಎಂದು ಕೊಪ್ಪ ಗ್ರಾಮದ ಯಂಬಾರ್ಜಿಯರ್ ಮಠದ ಆವರಣದಲ್ಲಿ ಭಾನುವಾರ ಸುದ್ದಗೋಷ್ಠಿಯಲ್ಲಿ ಮನವಿ ಮಾಡಿದರು.
ಅರಗಿನಮೇಳೆ ರಾಮೇಗೌಡ, ಹುರುಗಲವಾಡಿ ಉಮೇಶ್, ಕುಮಾರ್, ಜಗದೀಶ್, ಚನ್ನೇಗೌಡ ಇದ್ದರು.