ಅಮಿತ್ ಷಾರನ್ನು ಸಂಪುಟದಿಂದ ವಜಾಗೊಳಿಸಲು ಆಗ್ರಹ

Published on

ಮೈಸೂರು: ಡಾ.ಬಿ.ಆರ್.ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಗೃಹ ಸಚಿವ ಅಮಿತ್ ಷಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ, ದೇಶದಿಂದ ಗಡಿಪಾರು ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಡಾ.ಉಮಾಪತಿ ಪ್ರಧಾನಿಯನ್ನು ಒತ್ತಾಯಿಸಿದರು.

ಡಾ.ಬಿ.ಆರ್.ಅಂಬೇಡ್ಕರ್ ಸರ್ವಜನಾಂಗದ ಒಳಿತಿಗಾಗಿ ಸಂವಿಧಾನ ರಚಿಸಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ, ಹಕ್ಕುಗಳನ್ನು ದೊರಕಿಸಿ ಕೊಟ್ಟಿದ್ದಾರೆ. ಅಂತಹ ಮಹಾನ್ ಚೇತನಕ್ಕೆ ಅವಮಾನ ಮಾಡಿರುವುದು ದೇಶಕ್ಕೆ ಮಾಡಿದ ಅವಮಾನವಾಗಿದೆ. ಅವರನ್ನು ವಜಾಗೊಳಿಸದಿದ್ದರೆ ಹೋರಾಟ ನಡೆಸುವುದಾಗಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸಮಿತಿ ಅಧ್ಯಕ್ಷೆ ವಿ.ಪಿ.ಸುಶೀಲಾ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಪುಟ್ಟರಾಜು, ರಾಜ್ಯ ಉಪಾಧ್ಯಕ್ಷ ಚಾಮರಾಜು, ಕಾರ್ಯದರ್ಶಿ ಭಾಗ್ಯಮ್ಮ, ಖಜಾಂಚಿ ಬಿ.ಲತಾಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net